Advertisement

ಸಿಎಂ ಬಸ್‌ ಅಡ್ಡಗಟ್ಟಿದ 50 ಕಾರ್ಮಿಕರ ವಿರುದ್ಧ ಕೇಸ್‌

11:16 PM Jun 29, 2019 | Lakshmi GovindaRaj |

ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಜಿಲ್ಲೆಗೆ ಆಗಮಿಸಿದ್ದ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಯರಮರಸ್‌ ಬಳಿಯ ಅತಿಥಿಗೃಹದಿಂದ ಕರೇಗುಡ್ಡಕ್ಕೆ ತೆರಳುವಾಗ ಬಸ್‌ ಅಡ್ಡಲಾಗಿ ನಿಂತು ಪ್ರತಿಭಟನೆ ನಡೆಸಿದ 50 ಜನ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಿ.ಬಿ. ವೇದಮೂರ್ತಿ ತಿಳಿಸಿದ್ದಾರೆ.

Advertisement

ಟಿಯುಸಿಐ ರಾಜ್ಯಾಧ್ಯಕ್ಷ ಆರ್‌.ಮಾನಸಯ್ಯ, ಕಾರ್ಯದರ್ಶಿ ಅಮರೇಶ, ಸದಸ್ಯ ಜಿ.ಅಡವಿರಾವ್‌, ರವಿಚಂದ್ರ, ರಾಮರೆಡ್ಡಿ ಸೇರಿ 50 ಕಾರ್ಮಿಕರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಈ ಎಲ್ಲರೂ ದುರುದ್ದೇಶದಿಂದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಹೋಗಿ ಬರುವವರಿಗೆ ಅಡ್ಡಿಪಡಿಸುತ್ತಿದ್ದ ಕಾರಣಕ್ಕೆ ಗ್ರಾಮೀಣ ಠಾಣೆ ಪಿಎಸ್‌ಐ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್‌ ಅ ಧೀಕ್ಷಕರು ತಿಳಿಸಿದ್ದಾರೆ. ಇನ್ನು ಇದೇ ವಿಚಾರದಲ್ಲಿ ಭದ್ರತಾ ವೈಫಲ್ಯಕ್ಕೆ ಕಾರಣರಾದ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next