Advertisement
ತಮ್ಮ ವಿರುದ್ಧದ ಪ್ರಕರಣ ಹಾಗೂ ಅದಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಅಲೋಕ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣ ರದ್ದುಪಡಿಸಿ ಆದೇಶಿಸಿದೆ.
Related Articles
ರೌಡಿಶೀಟರ್ ಆಗಿದ್ದ ಬಿ.ಎಂ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಮತ್ತವರ ಆಪ್ತರು ವೈಯಾಲಿ ಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಆರೆಂಜ್ ಬಾರ್‌ನಲ್ಲಿ ಮದ್ಯ ಸೇವಿಸುವ ಸಂದರ್ಭದಲ್ಲಿ ಗಲಾಟೆ ನಡೆದಿತ್ತು. ಈ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣವನ್ನು ಮುಕ್ತಾಯಗೊಳಿಸಲು ವೈಯಾಲಿ ಕಾವಲ್ ಪೊಲೀಸ್ ಅಧಿಕಾರಿಗಳು ಪ್ರಾರಂಭದಲ್ಲಿ 5 ಲಕ್ಷ ರೂ. ಬಳಿಕ ಒಂದು ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿ¨ªಾರೆ ಎಂಬುದಾಗಿ ಫೈಟರ್ ರವಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಬಿ ರಿಪೋರ್ಟ್ ತಿರಸ್ಕರಿಸಿದ್ದ ವಿಶೇಷ ನ್ಯಾಯಾಲಯವು ಅಲೋಕ್ ಕುಮಾರ್ ವಿರುದ್ಧ ವಿಚಾರಣೆ ಮುಂದುವರೆಸಿತ್ತು. ಇದನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
Advertisement