ಬೆಳಗಾವಿ: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮಕರ ಸಂಕ್ರಾಂತಿ ಹಬ್ಬದಂದು ಹೆಮ್ಮೆಯ ಓಡಿಸುವ ಸ್ಪರ್ಧೆ ಹಾಗೂ ಧರ್ಮವೀರ ಸಂಭಾಜಿ ಮಹಾರಾಜರ ರಾಜ್ಯಾಭಿಷೇಕ ನಡೆಸಿ ಜನರನ್ನು ಸೇರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸು ದಾಖಲಾಗಿವೆ.
ನಗರದ ಚವಾಟ ಗಲ್ಲಿಯಲ್ಲಿ ಚವಾಟ ಯುವಕ ಸಂಘಟನೆ ಹಾಗೂ ಗವಳಿ ಸಮಾಜ ವತಿಯಿಂದ ಎಮ್ಮೆ ಓಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಗೆ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಚಾಲನೆ ನೀಡಿದ್ದರು. ಜತೆಗೆ ಬಹುಮಾನ ವಿತರಣೆ ಸಮಾರಂಭದಲ್ಲಿಯೂ ಪಾಲ್ಗೊಂಡಿದ್ದರು.
ಜತೆಗೆ ಧರ್ಮವೀರ ಸಂಭಾಜಿ ಮಹಾರಾಜ ವೃತ್ತದಲ್ಲಿ ಸಂಭಾಜಿ ಮಹಾರಾಜರ ರಾಜ್ಯಾಭಿಷೇಕ ಕಾರ್ಯಕ್ರಮದಲ್ಲಿ ಶಾಸಕ ಬೆನಕೆ ಪಾಲ್ಗೊಂಡಿದ್ದರು. ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಕ್ಯಾಂಪ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ:ಎಸ್‌ಬಿಐಗೆ 973 ಕೋಟಿ ಪರಿಹಾರ; ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ
ಸಾಂಗಲಿ, ಕೊಲ್ಲಾಪುರ, ಸಾತಾರಾ ಸೇರಿದಂತೆ ಬೆಳಗಾವಿಯ ವಿವಿಧ ಕಡೆಗಳಿಂದ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ಅನೇಕರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಪಾಲ್ಗೊಂಡಿದ್ದರು. ಈ ಬಗ್ಗೆ ದೂರು ದಾಖಲಿಸುವಂತೆ ಮಂಗಳವಾರ ರಾಜ್ಯ ಕಾಂಗ್ರೆಸ್ ವತಿಯಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಅವರಿಗೆ ಮನವಿ ಮಾಡಲಾಗಿತ್ತು.