Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಈಶ್ವರಪ್ಪ ಅವರು ರಾಜೀನಾಮೆ ನೀಡಲು ಬಂದಾಗ ಬಿಜೆಪಿ ನಾಯಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಅವರು ಕೂಗಾಟ, ಚೀರಾಟ ಮಾಡಿದರು. ಆದರೂ ಪ್ರಕರಣ ದಾಖಲಿಸಲಿಲ್ಲ ಇದು ರಾಜಕೀಯ ಅಲ್ಲವೇ ಎಂದು ಕೇಳಿದರು.
Related Articles
Advertisement
ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಸಮವಸ್ತ್ರ ತ್ಯಜಿಸಿ ಕೇಸರಿ ವಸ್ತ್ರ ಧರಿಸಿದರೂ ಸಿಎಂ, ಗೃಹಮಂತ್ರಿ ಸುಮ್ಮನಿದ್ದರು.ಹುಬ್ಬಳ್ಳಿ ಚರ್ಚ್ ಗೆ ನುಗ್ಗಿ ಬಲವಂತವಾಗಿ ಭಜನೆ ಮಾಡಿದರು. ಅನ್ಯಧರ್ಮಿಯರು ಜಾತ್ರೆಗಳಲ್ಲಿ ವ್ಯಾಪಾರ ಮಾಡಬಾರದು ಎಂದು ನಿರ್ಬಂಧ ಹೇರಿದರು ಇದೆಲ್ಲವನ್ನೂ ಸರ್ಕಾರ ನೋಡಿಕೊಂಡು ಸುಮ್ಮನಿದೆ ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆಯನ್ನು ಕಾಂಗ್ರೆಸ್ ಪಕ್ಷ ಉಗ್ರವಾಗಿ ಖಂಡಿಸುತ್ತದೆ. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಪೊಲೀಸ್ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ನಾವು ಅವರನ್ನು ಗೌರವಿಸುತ್ತೇವೆ, ಅಭಿನಂದಿಸುತ್ತೇವೆ ಎಂದು ಹೇಳಿದರು.