Advertisement

ಯುಪಿ ವಿದ್ಯಾರ್ಥಿನಿ ನಾಪತ್ತೆ ಪ್ರಕರಣ, ಕೇಂದ್ರ ಮಾಜಿ ಸಚಿವ ಚಿನ್ಮಮಯಾನಂದ ವಿರುದ್ಧ ಕೇಸ್

11:04 AM Aug 29, 2019 | Nagendra Trasi |

ಲಕ್ನೋ:ಉತ್ತರಪ್ರದೇಶದ ಕಾನೂನು ವಿದ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಮಯಾನಂದ ವಿರುದ್ಧ ಯುಪಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಉತ್ತರಪ್ರದೇಶದ ಷಹಜಹಾನ್ ಪುರ್ ದ 23 ವರ್ಷದ ಕಾನೂನು ವಿದ್ಯಾರ್ಥಿನಿ ಕಳೆದ ಶನಿವಾರ ಪ್ರಭಾವಿ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಕುರಿತು ಆರೋಪಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಯುವತಿ ನಿಗೂಢವಾಗಿ ನಾಪತ್ತೆಯಾಗಿದ್ದಳು.

ಯುವತಿ ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಯಾರ ಹೆಸರನ್ನೂ ನೇರವಾಗಿ ಉಲ್ಲೇಖಿಸಿರಲಿಲ್ಲವಾಗಿತ್ತು. ಆದರೆ ಯುವತಿಯ ತಂದೆ ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮಿ ಚಿನ್ಮಮಯಾನಂದ ವಿರುದ್ಧ ದೂರು ನೀಡಿದ್ದರು. ಸ್ವಾಮಿ ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸ್ವಾಮಿ ಚಿನ್ಮಮಯಾನಂದ ಅವರು 1999ರಿಂದ 2004ರವರೆಗೆ ಅಟಲ್ ಬಿಹಾರಿ ವಾಜಪೇಯಿ ಅವರ ಸರಕಾರದಲ್ಲಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಮತ್ತೊಂದು ವರದಿ ಪ್ರಕಾರ, ಯುವತಿ ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ತನ್ನನ್ನು ಸೇರಿದಂತೆ ಹಲವಾರು ವಿದ್ಯಾರ್ಥಿನಿಯರಿಗೆ ಸ್ವಾಮಿ ಚಿನ್ಮಮಯಾನಂದ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿದ್ದಳು. ಅಲ್ಲದೇ ಈ ಬಗ್ಗೆ ಎಲ್ಲಾ ಸಾಕ್ಷ್ಯಾಧಾರ ಇದ್ದಿರುವುದಾಗಿ ಆರೋಪಿಸಿದ್ದಳು. ಈ ವ್ಯಕ್ತಿ ತುಂಬಾ ಪ್ರಭಾವಶಾಲಿಯಾಗಿದ್ದು, ಜಿಲ್ಲಾಧಿಕಾರಿಯಾಗಲಿ, ಪೊಲೀಸ್ ವರಿಷ್ಠಾಧಿಕಾರಿಯಾಗಲಿ ಯಾರೂ ಕೂಡಾ ಕ್ರಮ ಕೈಗೊಳ್ಳುವುದಿಲ್ಲ ಎಂದು ದೂರಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next