Advertisement
ಇದನ್ನೂ ಓದಿ:ಈಶ್ವರಮಂಗಲ: ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ
Related Articles
“ನನ್ನ ವಿರುದ್ಧ ದಾಖಲಿಸಿದ್ದ ಎಫ್ ಐಆರ್ ಹಿಂಪಡೆಯುವಂತೆ ಪೊಲೀಸರಲ್ಲಿ ಬೇಡಿಕೊಂಡೆ. ಇದೊಂದು ಬೋಟ್ ದುರಂತದಲ್ಲಿ ಸಾವನ್ನಪ್ಪಿರುವ 20 ಶಾಲಾ ವಿದ್ಯಾರ್ಥಿಗಳ ಘಟನೆಯನ್ನು ನೆನಪಿಸುವ ವಾಟ್ಸಪ್ ಸ್ಟೇಟಸ್ ಆಗಿದೆ. ಆದರೆ ಪೊಲೀಸರು ನನ್ನ ಮೇಲೆ ಎಫ್ ಐಆರ್ ದಾಖಲಿಸಿದ್ದಾರೆ ಎಂದು ರೈನಾ ತಿಳಿಸಿರುವುದಾಗಿ ವರದಿ ವಿವರಿಸಿದೆ.
Advertisement
ಏತನ್ಮಧ್ಯೆ ಯುವ ಪತ್ರಕರ್ತನ ವಿರುದ್ಧ ಎಫ್ ಐಆರ್ ದಾಖಲಿಸಿದ್ದನ್ನು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ. ವಾಟ್ಸಪ್ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡಿಪೋರಾ ಪೊಲೀಸ್ ಠಾಣೆಯಲ್ಲಿ ಸಾಜಿದ್ ರೈನಾ ಎಂಬಾತನ ವಿರುದ್ಧ ಎಫ್ ಐಆರ್ ದಾಖಲಿಸಿದ್ದೇವೆ. ಯಾವ ಉದ್ದೇಶದಿಂದ ಈ ಫೋಟೊ ಮತ್ತು ಕಂಟೆಂಟ್ ಹಾಕಲಾಗಿದೆ ಎಂಬ ಬಗ್ಗೆ ತನಿಖೆ ನಡೆಸುವುದು ನಮ್ಮ ಉದ್ದೇಶವಾಗಿದೆ ಎಂದು ಜೂನ್ 4ರಂದು ಪೊಲೀಸರು ಟ್ವೀಟ್ ಮಾಡಿರುವುದಾಗಿ ವರದಿ ತಿಳಿಸಿದೆ.
ಈಗಾಗಲೇ ಪೊಲೀಸರು ಎರಡು ಬಾರಿ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಪ್ರಕರಣ ದಾಖಲಾದ ಕೂಡಲೇ ನಾನು ವಾಟ್ಸಪ್ ಸ್ಟೇಟಸ್ ಅನ್ನು ಡಿಲೀಟ್ ಮಾಡಿರುವುದಾಗಿ ಸಾಜಿದ್ ತಿಳಿಸಿದ್ದು, ಅಲ್ಲದೇ ತನ್ನ ವಿರುದ್ಧ ದಾಖಲಿಸಿದ ಎಫ್ ಐಆರ್ ಹಿಂಪಡೆಯುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಭರವಸೆ ನೀಡಿದ್ದಾರೆ. ನನ್ನ ಭವಿಷ್ಯ ಮತ್ತು ಉದ್ಯೋಗವನ್ನು ಗಮನದಲ್ಲಿರಿಸಿಕೊಂಡು ಎಫ್ ಐಆರ್ ಹಿಂಪಡೆಯಲಿದ್ದಾರೆ ಎಂಬ ವಿಶ್ವಾಸ ಹೊಂದಿರುವುದಾಗಿ ಸಾಜಿದ್ ತಿಳಿಸಿರುವುದಾಗಿ ವರದಿ ಹೇಳಿದೆ.