Advertisement

ನಳಿನ್ ಕುಮಾರ್ ಕಟೀಲ್ ಮೇಲಿನ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

09:37 AM Aug 28, 2019 | keerthan |

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ದ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

Advertisement

ಬಿಜೆಪಿ ಕಾರ್ಯಕರ್ತ ಕಾರ್ತಿಕ್ ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ 2017ರ ಜ.1ರಂದು ನಡೆದ ಪ್ರತಿಭಟನೆಯಲ್ಲಿ ಮಾತನಾಡುತ್ತಾ ಕಟೀಲ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

ಈ ಸಂಬಂಧ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಕಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next