Advertisement
ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ 2017ರಲ್ಲಿ ನಳಿನ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಎಫ್ಐಆರ್ ಹಾಗೂ ಜೆಎಂಎಫ್ಸಿ ನ್ಯಾಯಾಲಯದ ವಿಚಾರಣೆಯನ್ನು ರದ್ದುಪಡಿಸಿದೆ. ಇದರಿಂದ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದ ಸಂಸದರು ನಿರಾಳರಾಗಿದ್ದಾರೆ. ನಳಿನ್ ಪರವಾಗಿ ಪವನಚಂದ್ರ ಶೆಟ್ಟಿ ವಾದಿಸಿದ್ದರು.
Related Articles
ರಾಜ್ಯದಲ್ಲಿ ಕೋಮು ಗಲಭೆ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ 2017ರಂದು ಸೆ.7ರಂದು ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ರ್ಯಾಲಿ ಹಮ್ಮಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲು ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರನ್ನು ಮಂಗಳೂರು ಪೂರ್ವ ಠಾಣೆಯ ಇನ್‌ಸ್ಪೆಕ್ಟರ್ ಬಂಧಿಸಿದ್ದರು.
Advertisement
ಈ ಕುರಿತು ಮಾಹಿತಿ ಪಡೆದಿದ್ದ ನಳಿನ್, ಅಂದು ಮಧ್ಯಾಹ್ನ 3 ಗಂಟೆಗೆ ಠಾಣೆಗೆ ತೆರಳಿ ಕಾರ್ಯಕರ್ತರ ಬಂಧನದ ಕುರಿತ ಡೈರಿಯನ್ನು ತಮಗೆ ತೋರಿಸುವಂತೆ ಇನ್‌ಸ್ಪೆಕ್ಟರ್ ಮಾರುತಿ ಜಿ. ನಾಯಕ್ ಅವರನ್ನು ಕೇಳಿದ್ದರು. ಆಗ ಇನ್ಸ್‌ಪೆಕ್ಟರ್ ತಮ್ಮ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ನಳಿನ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ದೂರು ನೀಡಿದ್ದರು. ಬಳಿಕ ಎಫ್ಐಆರ್ ದಾಖಲಿಸಲಾಗಿತ್ತು. ಪ್ರಕರಣ ಮಂಗಳೂರು 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್ ತಲುಪಿತ್ತು.ಈ ದೂರನ್ನು ರದ್ದುಪಡಿಸಬೇಕು ಎಂದು ಕೋರಿ ನಳಿನ್ ಹೈಕೋರ್ಟ್ ಮೆಟ್ಟಿಲೇರಿದ್ದರು.