Advertisement

ಶಾರದಾ ಡೈಮಂಡ್‌ ವಿರುದ್ಧದ ಪ್ರಕರಣ ರದ್ದು

12:39 AM Jan 03, 2020 | mahesh |

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಂ.ಬಿ.ಪಾಟೀಲ್‌ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಿಎಲ್‌ಡಿಇ ಸಂಸ್ಥೆಯ ಲೆಟರ್‌ ಹೆಡ್‌ನ‌ಲ್ಲಿ ಬರೆದಿದ್ದರು ಎನ್ನಲಾದ ನಕಲಿ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಆರೋಪದ ಸಂಬಂಧ ಸಾಫ್ಟ್ವೇರ್‌ ಎಂಜಿನಿಯರ್‌ ಡಿ.ಆರ್‌. ಶಾರದಾ ಅಲಿಯಾಸ್‌ ಶಾರದಾ ಡೈಮಂಡ್‌ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

Advertisement

ವಿವಾದಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಠಾಣಾ ಪೊಲೀಸರು ದಾಖಲಿಸಿದ್ದ ಎಫ್ಐಆರ್‌ ಹಾಗೂ
ಪ್ರಕರಣ ರದ್ದುಗೊಳಿಸುವಂತೆ ಕೋರಿ ಶಾರದಾ ಡೈಮಂಡ್‌ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ
ಮಾನ್ಯ ಮಾಡಿರುವ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ
ಪ್ರಕರಣ ರದ್ದುಪಡಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲ ಅರುಣ್‌ ಶ್ಯಾಮ್‌ ವಾದ
ಮಂಡಿಸಿದ್ದರು.

ಜೊತೆಗೆ, ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಪ್ರಕರಣ ದಾಖಲಿಸಿಕೊಂಡಿದ್ದಕ್ಕೆ ಶ್ರೀರಾಂಪುರ
ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಹಾಗೂ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ಗೆ ತಲಾ 10 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿರುವ ನ್ಯಾಯಪೀಠ, ದಂಡದ ಮೊತ್ತವನ್ನು ಸಂಬಂಧಪಟ್ಟ ಅಧಿಕಾರಿಗಳು ಪಾವತಿಸಿ, ಆ ಬಗ್ಗೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ಗೆ ಅನುಪಾಲನಾ ವರದಿ ಸಲ್ಲಿಸಬೇಕೆಂದು
ನಿರ್ದೇಶಿಸಿದೆ. ಅರ್ಜಿದಾರರ ವಿರುಶಾರದಾ ಡೈಮಂಡ್‌ ವಿರುದ್ಧದ ಪ್ರಕರಣ ರದ್ದುದ ಗಂಭೀರ ಸ್ವರೂಪವಲ್ಲದ ಅಪರಾಧಕ್ಕೆ ಸಂಬಂಧಿಸಿದ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣ ದಾಖಲಿಸುವ ಮುನ್ನ ನಿಯಮ ಪ್ರಕಾರ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಅನುಮತಿ ಪಡೆದಿಲ್ಲ. ಅಲ್ಲದೇ 2015ರಲ್ಲಿ ಸುಪ್ರೀಂ
ಕೋರ್ಟ್‌ ಅಸಿಂಧುಗೊಳಿಸಿರುವ ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಸೆಕ್ಷನ್‌ 66(ಎ)
ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕಾನೂನು ಬಾಹಿರವಾಗಿದೆ ಎಂದು ತಿಳಿಸಿದ ಹೈಕೋರ್ಟ್‌,
ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next