Advertisement
ಪ್ರಕರಣ ಸಂದರ್ಭದಲ್ಲಿ ಎ1(ಮೊದಲ ಆರೋಪಿ) ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ಎಂ.ರಮೇಶ್, ಎ2 ಪೂರ್ವ ವಿಭಾಗದ ಡಿಸಿಪಿಯಾಗಿದ್ದ ಐಪಿಎಸ್ ಅಧಿಕಾರಿ ಅಜಯ್ ಹಿಲ್ಲೋರಿ, ಎ3 ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಆಗಿದ್ದ ಗೌರಿಶಂಕರ್, ಎ4 ಸಿಐಡಿ ಆರ್ಥಿಕ ಅಪ ರಾಧಗಳ ವಿಭಾಗದ ಡಿವೈಎಸ್ಪಿಯಾಗಿದ್ದ ಇ.ಬಿ. ಶ್ರೀಧರ್, ಎ5 ಸಿಐಡಿ ಆರ್ಥಿಕ ಅಪರಾಧ ವಿಭಾಗದ ಐಜಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್, ಎ6 ಪ್ರಕರಣದ ಮಾಸ್ಟರ್ ಮೈಂಡ್, ಐಎಂಎ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ಖಾನ್, ಎ7 ನಿರ್ದೇಶಕ ನಿಜಾವುದ್ದೀನ್, ಎ8 ನಿರ್ದೇಶಕ ವಸೀಂ, ಎ9 ಅಶ್ರದ್ ಖಾನ್, ಎ10 ಐಎಂಎ ಸಂಸ್ಥೆ ಮತ್ತು ಎ11 ಸರ್ಕಾರದ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
Related Articles
Advertisement
ಆದರೆ, ಈ ವರದಿ ತಿರಸ್ಕರಿಸಿದ ಆರ್‌ಬಿಐ ನೇರವಾಗಿ ಕಂದಾಯ ಇಲಾಖೆಗೆ ಪತ್ರ ಬರೆದು ಮತ್ತೂಮ್ಮೆ ಪರಿಶೀಲಿಸುವಂತೆ ಸೂಚಿಸಿತ್ತು. ಈ ಮಧ್ಯೆ ಐಎಂಎ ಕಂಪನಿ ವಿರುದ್ಧ ದೂರುಗಳು ಬಂದಿದ್ದು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪೊಲೀಸ್ ತನಿಖೆಗೆ ಸೂಚಿಸಿದ್ದರು. ಆದರೆ, ಪಿಐ ರಮೇಶ್, ಪಿಎಸ್‌ಐ ಗೌರಿಶಂಕರ್ ಮತ್ತು ಡಿಸಿಪಿ ಅಜಯ್ ಹಿಲ್ಲೋರಿ ಕ್ರಮ ತೆಗೆದುಕೊಳ್ಳದೆ ಪ್ರಕರಣ ಮುಚ್ಚಿ ಹಾಕಿದ್ದರು. ಮನ್ಸೂರ್ ಖಾನ್‌ನ ಆಮಿಷಕ್ಕೊಳಗಾಗಿ ಆತನ ಪರವಾಗಿ ವರದಿ ಸಲ್ಲಿಸಿದ್ದರು. ಈ ಮೂವರು ಅಧಿಕಾರಿಗಳು ಒಳಚಂಚು ರೂಪಿಸಿ, ಐಎಂಎ ಕಂಪನಿಗೆ ಲಾಭ ಮಾಡಿಕೊಟ್ಟಿದ್ದಾರೆ ಎಂದು ಸಿಬಿಐ ಹೇಳಿದೆ.
ಮೌಲ್ಯಯುತ ವಸ್ತು ಸ್ವೀಕಾರ ಆರೋಪ: ಠೇವಣಿದಾರರ ಸಂರಕ್ಷಣಾ ಕಾಯ್ದೆಯಡಿ ಐಎಂಎ ಕಂಪನಿಯ ವ್ಯವಹಾರಗಳನ್ನು ತನಿಖೆ ನಡೆಸುವಂತೆ 2018ರ ಜುಲೈ 4ರಂದು ಸರ್ಕಾರ ಸಿಐಡಿ ಆರ್ಥಿಕ ಅಪರಾಧಗಳ ವಿಭಾಗಕ್ಕೆ ವಹಿಸಿತ್ತು. ಆಗ ಈ ವಿಭಾಗದ ಐಜಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್ ಮತ್ತು ಡಿವೈಎಸ್ಪಿ ಇ.ಬಿ. ಶ್ರೀಧರ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿತ್ತು. ಅವರು 2019ರ ಜ. 1ರಂದು ಕಂಪನಿ ಯಾವುದೇ ಅವ್ಯವಹಾರದಲ್ಲಿ ತೊಡಗಿಲ್ಲ. ಕಾನೂನು ಬದ್ಧವಾಗಿಯೇ ಹಣ ಸಂಗ್ರಹಿಸುತ್ತಿದೆ ಎಂದು ಕಂಪನಿಯ ಪರವಾಗಿ ವರದಿ ಸಿದ್ದಪಡಿಸಿ 2019ರ ಜ. 18ರಂದು ಸಲ್ಲಿಸಿದ್ದರು. ಅಧಿಕಾರಿಗಳು ಲಂಚ ಹಾಗೂ ಮೌಲ್ಯಯುತ ವಸ್ತುಗಳನ್ನು ಸ್ವೀಕರಿಸಿದ್ದಾರೆ ಎಂಬ ಆರೋಪ ಸಿಬಿಐ ಮಾಡಿದೆ.
ಲಂಚದ ಬಗ್ಗೆ ಮನ್ಸೂರ್ ಹೇಳಿಕೆ: ಈ ಮಧ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮನ್ಸೂರ್ ಖಾನ್ ಸಿಬಿಐ ವಿಚಾರಣೆ ಸಂದರ್ಭದಲ್ಲಿ ತನ್ನ ಪರವಾಗಿ ವರದಿ ನೀಡುವಂತೆ ತನಿಖಾಧಿಕಾರಿಗಳು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಕೋಟ್ಯಂತರ ರೂ. ಲಂಚ ನೀಡಿರುವುದಾಗಿ ಹೇಳಿಕೆ ನೀಡಿದ್ದ. ಈ ಎಲ್ಲ ಮಾಹಿತಿ ಆಧರಿಸಿ ಐಪಿಎಸ್ ಅಧಿಕಾರಿಗಳು ಸೇರಿ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.