Advertisement
ಜೋಗ ಜಲಪಾತ ವೀಕ್ಷಣೆಗೆ ಬರುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಎರಡನೇ ಡೋಸ್ ಲಸಿಕೆ ಪಡೆದ ವರದಿ ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಆದರೆ ಇಲ್ಲಿನ ಸೆಕ್ಯೂರಿಟಿ ಗಾರ್ಡ್ ಗಳು ಈ ಆದೇಶಕ್ಕೆ ಕ್ಯಾರೆ ಅನ್ನದೆ, ಬಂದ ಪ್ರವಾಸಿಗರನ್ನು ಒಳಬಿಡುತ್ತಿದ್ದರು.
Related Articles
Advertisement
ಪ್ರವಾಸಿಗರಂತೆ ಒಳಗೆ ಹೋದರು
ಪೊಲೀಸರ ವಿಶೇಷ ತಂಡ ಪ್ರವಾಸಿಗರಂತೆ ಜೋಗ ಜಲಪಾತಕ್ಕೆ ತೆರಳಿದ್ದರು. ಇವರಿಗೆ ಕೋವಿಡ್ ನೆಗೆಟಿವ್ ವರದಿಯಾಗಲಿ, ಲಸಿಕೆ ಪಡೆದ ರಿಪೋರ್ಟಾಗಲಿ ವಿಚಾರಿಸಲಿಲ್ಲ. ನೇರವಾಗಿ ಜೋಗ ಜಲಪಾತ ವೀಕ್ಷಣೆಗೆ ಕಳುಹಿಸಲಾಗಿತ್ತು. ಹಾಗಾಗಿ ಕೂಡಲೇ ಸೆಕ್ಯೂರಿಟಿ ಗಾರ್ಡ್ ಮತ್ತು ಅಂಗಡಿ ಮಾಲೀಕರೊಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.
ಯಾರ ವಿರುದ್ಧ ಪ್ರಕರಣ?
ಜೋಗದ ಸೆಕ್ಯೂರಿಟಿಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಗಳು, ಗೈಡ್ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಚಂದ್ರಶೇಖರ್, ಹೋಂ ಗಾರ್ಡ್ ಗಳಾದ ಮಂಜುನಾಥ, ಕೃಷ್ಣಪ್ಪ, ಮಂಜುನಾಥ, ಸೆಕ್ಯೂರಿಟಿ ಗಾರ್ಡ್ ಗಳಾದ ರಾಕೇಶ, ಪ್ರಭುದಾಸ, ಅಂಗಡಿ ಮಾಲೀಕ ಸಂಜು ಅಲಿಯಾಸ್ ಮಂಜುನಾಥ್ ಎಂಬುವವರ ವಿರುದ್ಧ ಜೋಗ ಪೊಲೀಸ್ ಠಾಣೆಯಲ್ಲಿ ವಿಶೇಷ ತಂಡ ಪ್ರಕರಣ ದಾಖಲು ಮಾಡಿದೆ.