Advertisement
ಪ್ರಕರಣ ರದ್ದುಕೋರಿ ಶರಣ್ ಪಂಪ್‌ವೆಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ನೇತೃತ್ವದ ರಜಾ ಕಾಲದ ಏಕಸದಸ್ಯ ನ್ಯಾಯಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿತು. ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಶ್ರೀ ಮಂಗಳಾದೇವಿ ದೇವಸ್ಥಾನದ ಸುತ್ತ ಹಿಂದೂಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಶರಣ್ ಪಂಪ್‌ವೆಲ್ ಹಾಗೂ ಇತರರು ಕೇಸರಿ ಧ್ವಜಗಳನ್ನು ಕಟ್ಟಿದ್ದರು. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ನೀಡಿದ ದೂರಿನ ಆಧಾರದ ಮೇಲೆ ಶರಣ್ ಪಂಪ್‌ವೆಲ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. Advertisement
Mangalore: ಶರಣ್ ಪಂಪ್‌ವೆಲ್ ವಿರುದ್ಧದ ಪ್ರಕರಣಕ್ಕೆ ತಡೆ
07:39 AM Oct 20, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.