Advertisement

ಸೋನಿಯಾ ವಿರುದ್ಧದ ಪ್ರಕರಣ: ರಾಷ್ಟ್ರೀಯ ನಾಯಕರಿಂದ ಕ್ರಮ

12:38 PM May 24, 2020 | mahesh |

ಮೊಳಕಾಲ್ಮೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧದ ಪ್ರಕರಣ ಸಂಬಂಧ ಬಿಜೆಪಿಯ ರಾಷ್ಟ್ರೀಯ ನಾಯಕರು ಕಾನೂನಾತ್ಮಕ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾನೂನಿನ ಮೇಲೆ ಗೌರವ ಹೊಂದಿದ್ದು, ಕಾನೂನು ಎಲ್ಲರಿಗೂ ಒಂದೇ ಆಗಿದೆ. ಹಾಗಾಗಿ ರಾಷ್ಟ್ರೀಯ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

Advertisement

ಸಚಿವ ಮಾಧುಸ್ವಾಮಿಯವರು ಮಹಿಳೆಗೆ ಏಕವಚನದಲ್ಲಿ ಆಡಿದ ಮಾತಿನಿಂದ ನೋವಾಗಿದ್ದಕ್ಕೆ ಮಾಧ್ಯಮದ ಮೂಲಕ ಕ್ಷಮೆಯಾಚಿಸಿದ್ದಾರೆ. ಆ ಭಾಷೆಯನ್ನು ಉದ್ದೇಶಪೂರ್ವಕವಾಗಿ ಬಳಕೆ ಮಾಡಿಲ್ಲ ಎಂದು ಹೇಳಿದರು. ರಾಜ್ಯ ಹಾಗೂ ದೇಶದಲ್ಲಿ ಜೂನ್‌-ಜುಲೈ ತಿಂಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಸೋಂಕು ಹರಡದಂತೆ ಜಾಗ್ರತೆ ವಹಿಸಲಾಗುತ್ತಿದೆ. ಸೋಂಕು ನಿಯಂತ್ರಿಸಲು ಕಂಟೇನ್ಮೆಂಟ್‌ ಮತ್ತು ಬಫರ್‌ ಝೋನ್‌ಗಳಲ್ಲಿರುವವರಿಗೆ ಹೆಚ್ಚು ಆದ್ಯತೆ ನೀಡಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುವುದು. ಸೋಂಕು ಗ್ರಾಮೀಣ ಪ್ರದೇಶಕ್ಕೆ ವ್ಯಾಪಿಸದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next