Advertisement
ಕಾಲೇಜು ಆಡಳಿತ ಹಾಗೂ ವಿದ್ಯಾರ್ಥಿನಿಯರು ದೂರು ನೀಡಿದ ಹಿನ್ನೆಲೆಯಲ್ಲಿ ಸೋಮವಾರ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿ, ವಿದ್ಯಾರ್ಥಿನಿಯರ ಅಹವಾಲು ಆಲಿಸಿದರು. ನವೀನ್ ಕುಮಾರ್ ಎಂಬ ವ್ಯಕ್ತಿ ಕಾಲೇಜು ಕ್ಯಾಂಟೀನ್ ಮಾಲೀಕನ ಸ್ನೇಹಿತ ಎಂದು ಕಾಂಟೀನ್ ಪಕ್ಕದಲ್ಲಿಯೇ ಕಳೆದ ಎರಡು ವರ್ಷಗಳಿಂದ ಅಕ್ರಮವಾಗಿ ಮನೆ ಮಾಡಿಕೊಂಡು ವಾಸವಿದ್ದಾನೆ. ಪ್ರತಿ ನಿತ್ಯ ಕಾಲೇಜು ತುಂಬಾ ಓಡಾಡುವುದು, ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸುವ ಜತೆಗೆ ಕಾಲೇಜಿನ ಪ್ರಾಂಶುಪಾಲರಿಗೆ ಆಡಳಿತಕ್ಕೆ ಸಂಬಂಧಿಸಿದ ವಿಚಾರಗಳನ್ನು ಕೇಳಿ ಬೆದರಿಕೆ ಹಾಕುತ್ತಿದ್ದಾನೆ. ಈ ವಿಚಾರವಾಗಿ ಪೊಲೀಸರಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿನಿಯರು ಮಹಿಳಾ ಆಯೋಗ ಅಧ್ಯಕ್ಷರಿಗೆ ತಿಳಿಸಿದರು.
ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗದ ಅಧ್ಯಕ್ಷರು ಪೊಲೀಸರಿಗೆ ಸೂಚಿಸಿದ್ದು, ಈ ಸಂಬಂಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.