Advertisement

ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಹೊರಗಡೆ ಓಡಾಡುತ್ತಿದ್ದವರ ಮೇಲೆ ಕೇಸ್!

02:54 PM Jun 02, 2020 | keerthan |

ಯಾದಗಿರಿ: ಜಿಲ್ಲೆಯಲ್ಲಿ ಹೋಮ್ ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿ ಹೊರಗಡೆ ಸುತ್ತಾಡುತ್ತಿರುವವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

Advertisement

ಜಿಲ್ಲೆಯ ವಡಗೇರ ತಾಲೂಕಿನ ಬಿರನಕಲ್ ತಾಂಡ ಹಾಗೂ ಕಂಠಿ ತಾಂಡದ  ನಾಲ್ವರು ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಹೋಂ ಕ್ವಾರಂಟೈನ್ ಗೆ ಹೋಗಿದ್ದರು. ಆದರೆ ಹೋಂ ಕ್ವಾರಂಟೈನ್ ನಲ್ಲಿ ಇರುವ ಬದಲು ನಿಯಮ ಉಲ್ಲಂಘಿಸಿ ಹೊರಗಡೆ ಓಡಾಟ ನಡೆಸುತ್ತಿದ್ದರು.

ಇದನ್ನು ಗಮನಿಸಿದ ವಡಗೇರ ಗ್ರಾಮ ಲೆಕ್ಕಿಗ ಈ ನಾಲ್ವರ ವಿರುದ್ಧ ದೂರು ನೀಡಿದ್ದು, ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next