Advertisement

Kerala: ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ವಿರುದ್ಧ ಕೇಸು

01:03 AM Nov 01, 2023 | Team Udayavani |

ಕೊಚ್ಚಿ: ಸಮಾಜದ ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ವಿರುದ್ಧ ಕೇರಳ ಪೊಲೀ ಸರು ಕೇಸು ದಾಖಲಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ದಲ್ಲಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.

Advertisement

ಕೇರಳದಲ್ಲಿ ತುಷ್ಟೀಕರಣ ರಾಜಕೀಯ ನಡೆಯು ತ್ತಿದೆ ಎಂದು ರವಿವಾರ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಆರೋಪಿಸಿದ್ದರು. ಅದಕ್ಕೆ ಪೂರಕವಾಗಿ ಈ ಬೆಳವಣಿಗೆ ನಡೆದಿದೆ. ಪೊಲೀಸರ ಕ್ರಮವನ್ನು ಟೀಕಿಸಿದ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ಪಿಣರಾಯಿ ವಿಜಯನ್‌ ಅವರು, ಎಸ್‌ಡಿಪಿಐ, ಪಿಎಫ್ಐ, ಹಮಾಸ್‌ನಂಥ ಉಗ್ರ ಸಂಘಟನೆಗಳನ್ನು ಬೆಂಬಲಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

ಕೇಂದ್ರ ಸಚಿವರ ವಿರುದ್ಧ ಕೇಸು ದಾಖಲಿಸಿರುವುದು ಕೇರಳದಲ್ಲಿ ವಿಭಜನಾತ್ಮಕ ಶಕ್ತಿಗಳಿಗೆ ಕುಮ್ಮಕ್ಕು ನೀಡಿದಂತೆ ಆಗಲಿದೆ ಎಂದು ಬಿಜೆಪಿ ನಾಯಕ ಕೆ. ಸುರೇಂದ್ರನ್‌ ದೂರಿದ್ದಾರೆ.

ನ.29ರ ವರೆಗೆ ನ್ಯಾಯಾಂಗ ವಶಕ್ಕೆ:
ಕೊಚ್ಚಿಯಲ್ಲಿ ರವಿವಾರ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿರುವ ಡೊಮಿನಿಕ್‌ ಮಾರ್ಟಿನ್‌ನಲ್ಲಿ ನ.29ರ ವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿ ಕೋರ್ಟೊಂದು ಆದೇಶ ನೀಡಿದೆ. ಇದೇ ವೇಳೆ, ಕೇವಲ 3 ಸಾವಿರ ರೂ.ಗಳನ್ನು ವೆಚ್ಚ ಮಾಡಿ ಬಾಂಬ್‌ ಸಿದ್ಧಪಡಿಸಿದ್ದ ಬಗ್ಗೆ ಪೊಲೀಸರಿಗೆ ವಿಚಾರಣೆ ವೇಳೆ ತಿಳಿಸಿದ್ದಾನೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next