ದಲ್ಲಿ ಬಿರುಗಾಳಿ ಎಬ್ಬಿಸಿದೆ.
Advertisement
ಸರಕಾರದ ನಿರ್ಧಾರದ ಸಂಬಂಧ ಆಡಳಿತ ಹಾಗೂ ವಿಪಕ್ಷಗಳ ಮಧ್ಯೆ ವಾಕ್ಸಮರ ತೀವ್ರ ಗೊಂಡಿದ್ದು, ಚರ್ಚೆಯ ಕೇಂದ್ರ ಬಿಂದುವಾಗಿರುವ ಶಿವಕುಮಾರ್ ಮಾತ್ರ ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎಂಬಂತೆ ತೆಲಂಗಾಣ ಚುನಾವಣೆ ಪ್ರಚಾರಕ್ಕೆ ತೆರಳಿದ್ದಾರೆ. ಹೀಗಾಗಿ ನಿರ್ಧಾರವನ್ನು ಸಮರ್ಥಿಸಿಕೊಳ್ಳುವ ಅನಿ ವಾರ್ಯ ಸ್ಥಿತಿ ಸಿಎಂ ಸಿದ್ದರಾಮಯ್ಯ ಅವರಿಗೆ ಎದುರಾಗಿದೆ.ವಿಪಕ್ಷಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್‌ಗೆ ಸಂಪುಟದ ನಿರ್ಧಾರದಿಂದ ಹೊಸ ಅಸ್ತ್ರ ಸಿಕ್ಕಿ ದಂತಾಗಿದೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬಸನ ಗೌಡ ಪಾಟೀಲ್ ಯತ್ನಾಳ್ ಹಾಗೂ ಸಿ.ಟಿ. ರವಿ ರಾಜ್ಯ ಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ. ಇದೆಲ್ಲ ದಕ್ಕಿಂತ ಹೆಚ್ಚಾಗಿ ನ. 29ರಂದು ಹೈಕೋರ್ಟ್‌ನಲ್ಲಿ ನಡೆಯುವ ವಿಚಾರಣೆಯತ್ತ ಎಲ್ಲರ ದೃಷ್ಟಿ ನೆಟ್ಟಿದೆ.
ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, “ಸಿದ್ದರಾಮಯ್ಯ ಅವರ ಸಚಿವ ಸಂಪುಟ ಡಿ.ಕೆ. ಶಿವಕುಮಾರ್ ಪಾದದಡಿಯಲ್ಲಿ ಬಿದ್ದಿದೆ ಎಂಬುದು ಸಾಬೀ ತಾಗಿದೆ’ ಎಂದಿದ್ದಾರೆ. ಸಿಎಂ ಸಮರ್ಥನೆ
ಸಚಿವ ಸಂಪುಟ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸಭಾಧ್ಯಕ್ಷರ ಅನುಮತಿ ಇಲ್ಲದೆ, ಅಡ್ವೊಕೇಟ್ ಜನರಲ್ ಅಭಿಪ್ರಾಯವನ್ನು ಪರಿಗಣಿಸದೆ ಹಿಂದಿನ ಸರಕಾರ ಸಿಬಿಐ ತನಿಖೆಗೆ ಆದೇಶ ನೀಡಿದ್ದೇ ಕಾನೂನುಬಾಹಿರ. ಹೀಗಾಗಿ ಅನುಮತಿ ವಾಪಸ್ ಪಡೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ. ನ. 29 ರಂದು ಪ್ರಕಟವಾಗುವ ನ್ಯಾಯಾಲಯದ ಆದೇಶಕ್ಕೆ ಬೆದರಿ ಸರಕಾರ ಈ ನಿರ್ಧಾರ ತೆಗೆದುಕೊಂಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯಾಲಯದ ತೀರ್ಪಿನಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ. ಅದು ಏನು ತೀರ್ಪು ನೀಡುತ್ತದೆಯೋ ನೀಡಲಿ ಎಂದರು.
Related Articles
ವಿಜಯಪುರ: ರಾಜ್ಯ ಸಚಿವ ಸಂಪುಟದ ನಿರ್ಧಾರದ ವಿರುದ್ಧ ಹೈಕೋರ್ಟ್ ಮೊರೆ ಹೋಗುವುದಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಎಚ್ಚರಿಸಿದ್ದಾರೆ. ಕೂಡಲೇ ರಾಜ್ಯ ಸರಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ಪಾಲ್ಗೊಂಡವರಿಗೆ ಶಿಕ್ಷೆ ಆಗಲೇಬೇಕು. ತಮ್ಮ ಸರಕಾರ ಇದೆ ಎಂದು ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ಕಾನೂನುಬಾಹಿರವಾಗಿ ಸಚಿವ ಸಂಪುಟದಲ್ಲಿ ಹಿಂಪಡೆಯಲಾಗಿದೆ. 135 ಶಾಸಕರಿರುವ ಬಲಿಷ್ಠ ಸರಕಾರ ಇದೆ ಎಂದ ಮಾತ್ರಕ್ಕೆ ವಿಪಕ್ಷಗಳು ಇದನ್ನು ಪ್ರಶ್ನಿಸುವುದಿಲ್ಲ ಎಂದು ಭಾವಿಸಿದಂತಿದೆ. ನಮ್ಮಂಥ ಕೆಲವರು ಈ ವಿಷಯದಲ್ಲಿ ದೃಢವಾಗಿದ್ದು, ಗಟ್ಟಿ ಧ್ವನಿಯಲ್ಲೇ ವಿರೋಧಿ ಸಲಿದ್ದೇವೆ ಎಂದರು.
c
Advertisement