Advertisement

ಭಾರತದ ಮೇಲೆ ನ್ಯೂಕ್ಲಿಯರ್ ಯುದ್ಧದ ಬೆದರಿಕೆ; ಬಿಹಾರದಲ್ಲಿ ಖಾನ್ ವಿರುದ್ಧ ಕೇಸ್!

09:21 AM Sep 29, 2019 | Team Udayavani |

ಪಾಟ್ನ: ಭಾರತದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಹಾಗೂ ನ್ಯೂಕ್ಲಿಯರ್ ಬಾಂಬ್ ಬಳಸುವುದಾಗಿ ಬೆದರಿಕೆ ಹಾಕಿರುವ ಆರೋಪದ ಮೇಲೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಿಹಾರದ ಮುಜಾಫರ್ ಪುರ್ ಜಿಲ್ಲೆಯ ಕೋರ್ಟ್ ನಲ್ಲಿ ಶನಿವಾರ ದೂರನ್ನು ದಾಖಲಿಸಿಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಶುಕ್ರವಾರ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಇಮ್ರಾನ್ ಖಾನ್ ಭಾರತದ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿರುವುದಾಗಿ ದೂರಲಾಗಿದೆ. ವರದಿಯ ಪ್ರಕಾರ, ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಸ್ಥಳೀಯ ವಕೀಲರಾದ ಸುಧೀರ್ ಕುಮಾರ್ ಓಝಾ ದೂರು ದಾಖಲಿಸಿರುವುದಾಗಿ ತಿಳಿಸಿದೆ.

ಮುಜಾಫರ್ ಪುರ್ ನ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ದೂರು ದಾಖಲಿಸಲಾಗಿದೆ. ದೂರಿನ ಆಧಾರದ ಮೇಲೆ ಇಮ್ರಾನ್ ಖಾನ್ ವಿರುದ್ಧ ಎಫ್ ಐಆರ್ ದಾಖಲಿಸಲು ನಿರ್ದೇಶನ ನೀಡಬೇಕೆಂದು ಕೋರ್ಟ್ ಗೆ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಿಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next