Advertisement

ದೆಹಲಿ: ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ರೇಪ್ ಪ್ರಕರಣ ದಾಖಲು

11:15 AM Jun 28, 2022 | Team Udayavani |

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ.ಮಾಧವನ್‌ (71) ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. 26 ವರ್ಷ ವಯಸ್ಸಿನ ಯುವತಿಯೊಬ್ಬರು ಈ ಬಗ್ಗೆ ನವದೆಹಲಿಯ ಉತ್ತಮ ನಗರ ಪೊಲೀಸರಿಗೆ ಜೂ.25ರಂದು ನೀಡಿದ ದೂರಿನ ಆಧಾರದ  ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ.

Advertisement

ಇದನ್ನೂ ಓದಿ:ಮುಂಬಯಿ: ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಓರ್ವ ಸಾವು, 22 ಮಂದಿ ಅವಶೇಷಗಳಡಿ

ಪಿಪಿ ಮಾಧವನ್ (71ವರ್ಷ) ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ. 2020ರಲ್ಲಿ ತನ್ನ ಪತಿ ತೀರಿಹೋದ ನಂತರ ಉದ್ಯೋಗದ ಹುಡುಕಾಟದಲ್ಲಿದ್ದಾಗ ಮಾಧವನ್ ಅವರ ಪರಿಚಯವಾಗಿತ್ತು. ನಂತರ ಸಂದರ್ಶನಕ್ಕೆ ಕರೆದಿದ್ದರು, ಹೀಗೆ ಪರಿಚಯವಾದ ನಂತರ ವಿಡಿಯೋ ಕಾಲ್, ವಾಟ್ಸಪ್ ಚಾಟ್ ಮಾಡುತ್ತಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿದೆ.

2022ರ ಫೆಬ್ರುವರಿಯಲ್ಲಿ ಉತ್ತಮ್ ನಗರ ಮೆಟ್ರೋ ನಿಲ್ದಾಣದ ಸಮೀಪ ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿದ್ದರು. ನಂತರ ಸುಂದರ್ ನಗರದಲ್ಲಿರುವ ಫ್ಲ್ಯಾಟ್ ಗೆ ಕರೆದೊಯ್ದು ತನ್ನ ಒಪ್ಪಿಗೆ ಇಲ್ಲದೆ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ಮಹಿಳೆ ಆರೋಪಿಸಿದ್ದಾಳೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ ಮತ್ತು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ನವದೆಹಲಿಯಲ್ಲಿರುವ ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಪತಿ 2020ರಲ್ಲಿ ಅಸುನೀಗಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next