Advertisement

ನಿಯಮ ಉಲ್ಲಂಘಿಸಿದರೆ ಮೊಕದ್ದಮೆ

01:19 PM Jul 17, 2020 | Suhan S |

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್‌-19 ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಆಸ್ಪತ್ರೆಗಳು, ಕೋವಿಡ್‌ ಕೇರ್‌ಸೆಂಟರ್‌, ಐಸಿಯು ಮತ್ತು ವೆಂಟಿಲೇಟರ್‌ಗಳನ್ನು ಗುರುತಿಸಿ ಸಮರ್ಪಕ ಚಿಕಿತ್ಸೆ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಸೂಚಿಸಿದರು.

Advertisement

ಜಿಲ್ಲಾಧಿಕಾರಿ, ಪೊಲೀಸ್‌ ಆಯುಕ್ತ ಹಾಗೂ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಸಭೆ ನಡೆಸಿದ ಸಚಿವರು, ಕೋವಿಡ್‌ ನಿಯಂತ್ರಣಕ್ಕೆ ಜಾರಿಗೊಳಿಸಿರುವ ಲಾಕ್‌ಡೌನ್‌ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ನಿಯಮ ಉಲ್ಲಂಘನೆಗೆ ಅವಕಾಶ ನೀಡಬಾರದು. ಸಾರ್ವಜನಿಕರು ಅನಗತ್ಯ ಸಂಚರಿಸಬಾರದು. ಲಾಕ್‌ಡೌನ್‌ ಸಂದರ್ಭದಲ್ಲಿ ವಿನಾಯಿತಿ ನೀಡಲಾದ ಕೈಗಾರಿಕೆ, ಕಟ್ಟಡ ನಿರ್ಮಾಣ, ವಾಣಿಜ್ಯ ಮೊದಲಾದ ಚಟುವಟಿಕೆಗಳನ್ನು ಹೊರತುಪಡಿಸಿ ಇತರೆ ವ್ಯಾಪಾರ-ವಹಿವಾಟುಗಳಿಗೆ ಅವಕಾಶ ನೀಡಬಾರದು. ನಿಯಮ ಉಲ್ಲಂ ಸಿದ ಪ್ರಕರಣಗಳು ಕಂಡು ಬಂದರೆ ಅಂಥವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದರು.

ಹೊರ ಜಿಲ್ಲೆಗಳಿಂದ ಅನಧಿಕೃತವಾಗಿ ಯಾರಿಗೂ ಪ್ರವೇಶ ನೀಡಬಾರದು. ಹೆಚ್ಚುತ್ತಿರುವ ಸೋಂಕಿನ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆ, ಕೋವಿಡ್‌ ಕೇರ್‌ಸೆಂಟರ್‌, ಐಸಿಯು ಮತ್ತು ವೆಂಟಿಲೇಟರ್‌ಗಳನ್ನು ಗುರುತಿಸಬೇಕು.ಖಾಸಗಿ ಆಸ್ಪತ್ರೆಗಳು ಸಹಕಾರ ನೀಡದಿದ್ದರೆ ಸಾಂಕ್ರಾಮಿಕ ರೋಗಗಳು ತಡೆ ಕಾಯ್ದೆ 1897 ಅಡಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹು-ಧಾ ಪೊಲೀಸ್‌ ಆಯುಕ್ತ ಆರ್‌. ದಿಲೀಪ, ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಈ ಸಂದರ್ಭದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next