Advertisement

ಕ್ವಾರಂಟೈನ್‌ನಿಂದ ಹೊರ ಬಂದ್ರೆ ಕೇಸ್‌

05:18 AM Jun 06, 2020 | Suhan S |

ಬಾಗಲಕೋಟೆ: ಹೋಂ ಕ್ವಾರಂಟೈನ್‌ನಲ್ಲಿ ಇರುವವರು 14 ದಿನಗಳ ಕಾಲ ಮನೆಯಿಂದ ಹೊರಗೆ ಬರದಂತೆ ಹೆಚ್ಚಿನ ನಿಗಾ ವಹಿಸಬೇಕು. ಸೂಚನೆ ಬಳಿಕವೂ ಹೊರ ಬಂದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಸೂಚಿಸಿದರು.

Advertisement

ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಕೋವಿಡ್‌-19 ನಿಯಂತ್ರಣ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೇರೆ ಜಿಲ್ಲೆ ಹಾಗೂ ರಾಜ್ಯಕ್ಕೆ ಕಾರ್ಮಿಕರು ಕಾಲ್ನಡಿಗೆಯಲ್ಲಿ ಹೋಗದಂತೆ ನೋಡಿಕೊಳ್ಳಬೇಕು. ಅವರನ್ನು ಬಸ್‌ ಮತ್ತು ಶ್ರಮಿಕ ರೈಲುಗಳ ಮೂಲಕ ಕಳುಹಿಸಬೇಕು ಎಂದರು.

ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ಒಟ್ಟು 86 ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆಯಾ ತಾಲೂಕಿನ ತಹಶೀಲ್ದಾರರು ಕ್ವಾರಂಟೈನ್‌ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಅಲ್ಲದೇ ಅವರನ್ನು ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆಗೆ ಒಳಪಡಿಸುತ್ತಿರುವ ಬಗ್ಗೆ ಪರಿಶೀಲಿಸಿ ಚೆಕ್‌ಲಿಸ್ಟ್ ನಲ್ಲಿ ವರದಿ ನೀಡುವಂತೆ ಸೂಚಿಸಿದರು.

ಕೆಲಸ ಅರಸಿ ಬೇರೆಡೆಗೆ ವಲಸೆ ಹೋಗಿದ್ದ 3432 ಕಾರ್ಮಿಕರು ಮರಳಿ ಬಂದಿದ್ದು, ಅವರಿಗೆ ಉದ್ಯೋಗ ಖಾತರಿ ಯೋಜನೆ ಮೂಲಕ ಜಾಬ್‌ ಕಾರ್ಡ್‌ ಕೊಟ್ಟು ಉದ್ಯೋಗ ನೀಡಿ ಬೇರೆಡೆ ಹೋಗದಂತೆ ಕ್ರಮವಹಿಸಬೇಕು. ಜಿಲ್ಲೆಗೆ ಆಗಮಿಸಿದ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಕೊಡುವ ವ್ಯವಸ್ಥೆ ಮಾಡುವ ಜತೆಗೆ ಅವರಿಗೆ ಸರ್ಕಾರ ತಿಳಿಸಿದ ಹಾಗೂ ಪ್ರತಿ ಕುಟುಂಬಕ್ಕೆ 5 ಕೆ.ಜಿ ಹಾಗೂ 1 ಕೆ.ಜಿ ಕಡಲೆಕಾಳು ಉಚಿತವಾಗಿ ನೀಡಬೇಕೆಂದರು.

91 ಜನರಿಗೆ ಸೋಂಕು: ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ. ರಾಜೇಂದ್ರ ಮಾತನಾಡಿ, ಒಟ್ಟು 91 ಸೋಂಕಿತ ಪ್ರಕಟಣಗಳ ಪೈಕಿ 74 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. 16 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು 8627 ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 8354 ನೆಗೆಟಿವ್‌, 91 ಪಾಸಿಟಿವ್‌ ಹಾಗೂ 1 ಮೃತ ಪ್ರಕರಣ ವರದಿಯಾಗಿದೆ. 14 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ನಿಂದ 2687 ಜನರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮುಧೋಳ ನಗರದ ವಡ್ಡರಗಲ್ಲಿ ಮತ್ತು ಢಾಣಕಶಿರೂರ ಗ್ರಾಮದಲ್ಲಿ ಮಾತ್ರ ಕಂಟೇನ್ಮೆಂಟ್‌ ಝೋನ್‌ ಮಾತ್ರ ಇದೆ ಎಂದರು.

Advertisement

ಜಿಪಂ ಸಿಇಒ ಗಂಗೂಬಾಯಿ ಮಾನಕರ ಮಾತನಾಡಿ, ಕೋವಿಡ್‌-19  ಭೀತಿ ಹಿನ್ನೆಲೆಯಲ್ಲಿ ಲಾಕ್‌ಡೌನ್‌ದಿಂದ ಕೆಲಸಕ್ಕೆ ಬರದೇ ಇರುವುದರಿಂದ ಖಾತ್ರಿ ಯೋಜನೆಯಲ್ಲಿ ಶೇ.46.62 ಮಾತ್ರ ಸಾಧನೆ ಮಾಡಲಾಗಿದೆ. ರಾಜ್ಯದಲ್ಲಿ ಜಿಲ್ಲೆ 19 ಸ್ಥಾನದಲ್ಲಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಸಿದ್ದು ಹುಲ್ಲೊಳ್ಳಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ, ಆಹಾರ ಇಲಾಖೆ ಉಪ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಾ.ಶಿ. ಇಲಾಖೆ ಉಪ ನಿರ್ದೇಶಕ ಎಸ್‌.ಎಸ್‌. ಬಿರಾದಾರ ಇದ್ದರು.

ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿದ್ದು, ಕೃಷ್ಣಾ ನದಿ ಪ್ರವಾಹದಿಂದ ಬಾಧಿತಗೊಳ್ಳುವ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಕಳೆದ ಸಾಲಿನಲ್ಲಿ ಉಂಟಾದ ಪ್ರವಾಹದಿಂದ ಹಾನಿಯಾದ ಮನೆಗಳ ಪೈಕಿ ಎಷ್ಟು ಮನೆಗಳ ಕಟ್ಟಡ ಪ್ರಾರಂಭವಾಗಿವೆ. ಪ್ರಾರಂಭವಾಗಬೇಕಾದ ಮನೆಗಳು ಎಷ್ಟು ಮತ್ತು ಪ್ರಾರಂಭವಾಗದೇ ಇರುವ ಮನೆಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲೆ ಬಾಗಲಕೋಟೆ ಮತ್ತು ಜಮಖಂಡಿ ಉಪ ವಿಭಾಗಾಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು. -ಶಿವಯೋಗಿ ಕಳಸದ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

Advertisement

Udayavani is now on Telegram. Click here to join our channel and stay updated with the latest news.

Next