Advertisement

ವರದಿಗೆ ಪ್ರತಿಕ್ರಿಯೆ ನೀಡಲು ಸರ್ಕಾರಕ್ಕೆ ಹೈ ಸೂಚನೆ‌

10:21 AM Oct 27, 2021 | Team Udayavani |

 ಬೆಂಗಳೂರು: ರಾಜಧಾನಿಯಲ್ಲಿ ಮಕ್ಕಳನ್ನು ಭಿಕ್ಷಾ ಟನೆಗೆ ದೂಡುತ್ತಿರುವ ಹಾಗೂ ಮಕ್ಕಳ ಕಳ್ಳ ಸಾಗಾ ಣಿಕೆ ದಂಧೆಯ ಬಗ್ಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ 2021ರ ಜು.12 ರಂದು ಸಲ್ಲಿಸಿರುವ ಅಂತಿಮ ವರದಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

Advertisement

ನಗರದ ರಸ್ತೆಗಳಲ್ಲಿ ವ್ಯಾಪಾರ ಮಾಡಲು ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಲೆಟ್ಜ್ ಕಿಟ್‌ ಫೌಂಡೇಶನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ಈ ನಿರ್ದೇಶನ ನೀಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪುತ್ತಿಗೆ ರಮೇಶ್‌ ವಾದ ಮಂಡಿಸಿ, ನಗರದಲ್ಲಿ ರಸ್ತೆ ಬದಿ ಆಟಿಕೆ, ಹೂ ಸೇರಿದಂತೆ ಇನ್ನಿತರ ವಸ್ತುಗಳ ಮಾರಾಟದಲ್ಲಿ ತೊಡಗಿರುವ ಮಕ್ಕಳ ಬಗ್ಗೆ ಕಾನೂನು ಸೇವೆಗಳ ಪ್ರಾಧಿಕಾರ ಸರ್ವೇ ನಡೆಸಿ ವರದಿ ವಿವರ ವಾದ ಸಲ್ಲಿಸಿದೆ.

ಮಕ್ಕಳನ್ನು ಕಳ್ಳ ಸಾಗಣಿಕೆಗೆ ತಳ್ಳುತ್ತಿರು ವುದು ಸೇರಿದಂತೆ ಕೆಲವೊಂದು ಆಘಾತಕಾರಿ ವಿಷಯಗಳು ವರದಿಯಲ್ಲಿ ಹೇಳಲಾಗಿದೆ ಎಂದರು. ಕಾನೂನು ಸೇವೆಗಳ ಪ್ರಾಧಿಕಾರ ಪರ ವಕೀಲೆ ಮೈತ್ರೇಯಿ ಕೃಷ್ಣನ್‌ ಹಾಜರಾಗಿ, ಪ್ರಾಧಿಕಾರವು 2021ರ ಜು. 12ರಂದು ವರದಿ ಸಲ್ಲಿಸಿದೆ. ಈ ವರದಿಗೆ ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ:- ನಟಿ ಮೇಲೆ ಹಲ್ಲೆ: ಮಾಜಿ ಪ್ರಿಯಕರ ಸೆರೆ

ಆರೋಪಿಯ ಶಿಕ್ಷಣ ಇಲಾಖೆಯ ಅಧಿಕಾರಿ ಆಗಿರುವುದರಿಂದ ಅವರ ವಿರುದ್ಧದ ವಿಚಾರಣೆಗೆ ಪೂರ್ವಾನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಪೂರ್ವಾ ನುಮತಿ ಸಿಕ್ಕ ಬಳಿಕ ಮುಂದಿನ ಕ್ರಮ ಜರುಗಿಸಲಾ ಗುವುದು. ಇದಕ್ಕೆ ಕಾಲಾವಕಾಶ ಬೇಕು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯ ಪೀಠ, ವಿಜಯನಗರ ಠಾಣಾ ಪೊಲೀಸರ ತನಿಖಾ ವರದಿಯನ್ನು ಅರ್ಜಿದಾರರು ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಪರ ವಕೀಲರಿಗೆ ಒದಗಿಸಬೇಕು. ಅವರು ವರದಿಯನ್ನು ಪರಿಶೀಲಿಸಿ ಅಭಿಪ್ರಾಯ ತಿಳಿಸಬಹುದು. ಇನ್ನೂ ಪ್ರಾಧಿಕಾರದ ವರದಿಗೆ ಸರ್ಕಾರ ಪ್ರತಿಕ್ರಿಯೆ ನೀಡಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು 2022ರ ಜ.6ಕ್ಕೆ ಮುಂದೂಡಿತು.

Advertisement

ಆನ್‌ಲೈನ್‌ ಬೆಟ್ಟಿಂಗ್ ನಿಷೇಧ: ಹೈಕೋರ್ಟ್‌ಗೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್‌ ಬೆಟ್ಟಿಂಗ್‌, ಗೇಮಿಂಗ್‌ ಹಾಗೂ ಗ್ಯಾಂಬ್ಲಿಂಗ್‌ ನಿಷೇಧಿಸಿ ಕರ್ನಾಟಕ ಪೊಲೀಸ್‌ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ ಗೆ ಮಾಹಿತಿ ನೀಡಿದೆ.

ಈ ಕುರಿತು ದಾವಣಗೆರೆಯ ಡಿ.ಆರ್‌. ಶಾರದಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಮಂಗಳವಾರ ಸರ್ಕಾರ ಈ ಮಾಹಿತಿ ನೀಡಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಹಾಜರಾಗಿ, ರಾಜ್ಯದಲ್ಲಿ ಎಲ್ಲ ಬಗೆಯ ಆನ್‌ಲೈನ್‌ ಗ್ಯಾಂಬ್ಲಿಂಗ್‌ ಹಾಗೂ ಬೆಟ್ಟಿಂಗ್‌ ನಿಷೇಧಿ ಸುವ ಸಲುವಾಗಿ ಕರ್ನಾಟಕ ಪೊಲೀಸ್‌ (ತಿದ್ದು ಪಡಿ) ಕಾಯ್ದೆ-2021 ಜಾರಿಗೆ ತರಲಾಗಿದೆ. ಹೀಗಾಗಿ, ಅರ್ಜಿದಾರರ ಮನವಿ ಈಡೇರಿರು ವುದ ರಿಂದ ಅರ್ಜಿಯು ವಿಚಾರಣಾ ಮಾನ್ಯತೆ ಕಳೆದುಕೊಂಡಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಈಗಾಗಲೇ ಸರ್ಕಾರ ಆನ್‌ಲೈನ್‌ ಬೆಟ್ಟಿಂಗ್‌ ನಿಷೇಧಿಸಿದೆ.

ಅರ್ಜಿದಾರರ ಮನವಿ ಈಡೇರಿರುವ ಕಾರಣ ಅರ್ಜಿ ವಿಚಾರಣಾ ಮಾನ್ಯತೆ ಕಳೆದು ಕೊಂಡಿದ್ದು, ಅರ್ಜಿದಾರರೂ ಅದನ್ನು ಒಪ್ಪಿಕೊಂಡಿ ದ್ದಾರೆ. ವಿಚಾರಣಾ ಮಾನ್ಯತೆ ಕಳೆದುಕೊಂಡ ಅರ್ಜಿ¿åನ್ನು ಇತ್ಯರ್ಥ ಪಡಿಸಲು ಸಾಧ್ಯವಿಲ್ಲ. ಅದನ್ನು ವಜಾಗಳಿಸಬೇಕಾ ಗುತ್ತದೆ ಎಂದು ತಿಳಿಸಿದ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದಿದೆ. ಅರ್ಜಿ ಇತ್ಯರ್ಥಪಡಿಸಲು ಅಭ್ಯಂತರವಿಲ್ಲ. ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಆದರೆ, ಆನ್‌ಲೈನ್‌ ಗ್ಯಾಂಬ್ಲಿಂಗ್‌, ಗೇಮಿಂಗ್‌ ಮತ್ತು ಬೆಟ್ಟಿಂಗ್‌ ನಿಯಂತ್ರಿಸುವ ವ್ಯವಸ್ಥೆ ಇಲ್ಲ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next