Advertisement

ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

02:06 PM Sep 11, 2021 | Team Udayavani |

ದಾವಣಗೆರೆ: ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

Advertisement

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾ ಪಟ್ಟಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಮ್ಜದ್ ಖಾನ್ (44 ವ), ಇಸ್ಮಾಯಿಲ್ ಖಾನ್ (42 ವ) ನೂರ್ ಅಹ್ಮದ್ (36 ವ) ಬಂಧಿತ ಆರೋಪಿಗಳು.

ಸೆ. 2 ರಂದು ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಅವರ ಕೊಲೆ ನಡೆದಿತ್ತು. ಶುಕ್ರವಾರ ಬೆಳಕಿಗೆ ಬಂದಿತ್ತು.

ಆರೋಪಿಗಳು ಬಸವಾ ಪಟ್ಟಣದ ಗುಡ್ಡದಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿ, ಹೂತು ಹಾಕಿದ್ದರು. ಅನೈತಿಕ ಸಂಬಂಧವೇ ಕೊಲೆಗೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ಕೊಲೆಯಾದ ಕೈ ಮುಖಂಡ ಜೈನುಲ್ಲಾ ಖಾನ್ ಆರೋಪಿ ಅಮ್ಜದ್ ಖಾನ್ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದರಂತೆ. ಈ ವಿಷಯ ಆರೋಪಿ ಅಮ್ಜದ್ ಖಾನ್ ಗಮನಕ್ಕೆ ಬಂದಿತ್ತು. ಹಾಗಾಗಿ ಸಹೋದರ ಇಸ್ಮಾಯಿಲ್ ಖಾನ್ ಹಾಗೂ ಸ್ನೇಹಿತ ನೂರ್ ಅಹ್ಮದ್ ಜೊತೆ ಸೇರಿ ಜೈನುಲ್ಲಾ ಖಾನ್ ಅವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ನಮ್ಮ ಪಾಲಿನ ನೀರನ್ನು ಪಡೆಯುವ ಯೋಜನೆಗಳ ಜಾರಿಗೆ ಸದಾ ಬದ್ಧ: ಗೋವಿಂದ ಕಾರಜೋಳ

Advertisement

ಮೃತ ಜೈನುಲ್ಲಾ ಖಾನ್ ಬೆಸ್ಕಾಂ ಗುತ್ತಿಗೆದಾರನಾಗಿದ್ದು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿದ್ದರು. ಒಂದು ವಾರದ ಹಿಂದೆ ನಾಪತ್ತೆ ಆಗಿದ್ದರು. ಉದ್ದೇಶಪೂರ್ವಕವಾಗಿ ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ .ರಿಷ್ಯಂತ್ ಭೇಟಿ ನೀಡಿ ಪರಶೀಲನೆ ನಡೆಸಿದ್ದರು.  ಬಸವಾಪಟ್ಟಣದ ಪೊಲೀಸರು ಆರೋಪಿಗಳನ್ನು ಬಂಧಿಸಿ ಶನಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next