Advertisement

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

07:07 PM Nov 28, 2024 | Team Udayavani |

ಬೆಂಗಳೂರು: ಶಿಕ್ಷಕಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕರ್ನಾಟಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

75ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿರುವ ಬೆಂಗಳೂರಿನ ಪ್ರತಿಷ್ಠಿತ ಶಾಲೆಯಲ್ಲಿ 38 ವರ್ಷದ ಶಿಕ್ಷಕಿ ದೂರು ದಾಖಲಿಸಿದ್ದಾರೆ. ಶಾಲೆಯ ಅಧ್ಯಕ್ಷರಾಗಿರುವ ಗುರಪ್ಪ ನಾಯ್ಡು ಲೈಂಗಿಕ ಕಿರುಕುಳ ನೀಡಿ ನನಗೆ ಹಿಂಸೆ ನೀಡಿದ್ದಾರೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

2021, ಮಾರ್ಚ್ 1 ರಿಂದ 2023, ಆಗಸ್ಟ್ 15 ರವರೆಗೆ ಕಿರುಕುಳ ಕೃತ್ಯ ನಡೆದಿದೆ ಎಂದು ಅವರು ಆರೋಪಿಸಲಾಗಿದ್ದು,
ಗುರಪ್ಪ ನಾಯ್ಡು ಅವರು ಆರೋಪವನ್ನು ತಳ್ಳಿಹಾಕಿದ್ದು, ಇದು ಸುಳ್ಳು ಮತ್ತು ನಿರಾಧಾರ ಎಂದು ಹೇಳಿದ್ದಾರೆ.

ಶಿಕ್ಷಕಿಯ ದೂರಿನ ಆಧಾರದ ಮೇಲೆ ಚನ್ನಮ್ಮನಕೆರೆ ಅಚ್ಚುಕಟ್ಟೆ ಠಾಣೆ ಪೊಲೀಸರು ನವೆಂಬರ್ 26 ರಂದು ಐಪಿಸಿ ಕಲಂ 354, 506, 509 504 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಗುರಪ್ಪ ನಾಯ್ಡು ಅವರು, ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ತಳ್ಳಿಹಾಕಿ ಈ ಕುರಿತು ಶೀಘ್ರವೇ ಪತ್ರಿಕಾಗೋಷ್ಠಿ ಕರೆಯುವುದಾಗಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next