Advertisement
ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಚೋಪ್ರಾ ಸಲ್ಲಿಸಿದ ಮೇಲ್ಮನವಿಯ ಕುರಿತು ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
Related Articles
Advertisement
ಡಿಸೆಂಬರ್‌ನಲ್ಲಿ, ಅಶ್ಲೀಲ ವಿಡಿಯೋಗಳನ್ನು ವಿತರಿಸಿದ ಆರೋಪದ ಮೇಲೆ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬಂಧನದಿಂದ ರಕ್ಷಣೆ ನೀಡಿತ್ತು.
ಕುಂದ್ರಾ ವಿರುದ್ಧ ಭಾರತೀಯ ದಂಡ ಸಂಹಿತೆಯ ಕೆಲವು ಸೆಕ್ಷನ್‌ಗಳು, ಮಹಿಳೆಯರ ಅಸಭ್ಯ ಪ್ರಾತಿನಿಧ್ಯ (ತಡೆಗಟ್ಟುವಿಕೆ) ಕಾಯಿದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಗಳ ಅಡಿಯಲ್ಲಿ ಲೈಂಗಿಕ ಅಶ್ಲೀಲ ವೀಡಿಯೊಗಳನ್ನು ಹಂಚಿದ್ದಾರೆ ಎಂದು ಆರೋಪಿಸಲಾಗಿದೆ.
ಬಂಧನದ ಭೀತಿಯಿಂದ ಕುಂದ್ರಾ ಮೊದಲು ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಕೋರಿದರು, ಆದರೆ ಅದನ್ನು ನಿರಾಕರಿಸಲಾಯಿತು. ನಂತರ ತನ್ನನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.