Advertisement

ರಾಜ್ಯದ ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಇಳಿಕೆ : ಪಾಸಿಟಿವಿಟಿ ದರ 13.45%

07:44 PM Feb 01, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಇಳಿಕೆ ಕಂಡು ಬರುತ್ತಿದ್ದು, ಮಂಗಳವಾರ 14,366 ಹೊಸ ಪ್ರಕರಣಗಳು ವರದಿಯಾಗಿದ್ದು, ಇಂದು 58 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಪೈಕಿ 9 ಮಂದಿ ಬೆಂಗಳೂರಿನವರು.

Advertisement

ಪಾಸಿಟಿವಿಟಿ ದರವೂ ದರವು ಕುಸಿಯುತ್ತಲೇ ಇರುವುದರಿಂದ ಬೆಂಗಳೂರಿನಲ್ಲಿ ಪ್ರಕರಣಗಳು 7 ಸಾವಿರಕ್ಕಿಂತ ಕೆಳಗಿಳಿದಿದ್ದು, ಇಂದು 6,685 ಪ್ರಕರಣಗಳು ದೃಢ ಪಟ್ಟಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ 13.45% ಆಗಿದೆ. ಇಂದು 60,914 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ 1,97,725 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲಿ 1ಲಕ್ಷದ 05 ಸಾವಿರ ಪ್ರಕರಣಗಳಿವೆ.

ಇಂದು 1,06,799 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next