Advertisement

Caste census: ಬಿಜೆಪಿ ತಕರಾರಿಲ್ಲ ಮಾತು ಕೇಳಿ ನಿರಾಳ: ಸಿಎಂ ಸಿದ್ದರಾಮಯ್ಯ

07:37 AM Oct 09, 2024 | Team Udayavani |

ಬೆಂಗಳೂರು: ಜಾತಿ ಜನಗಣತಿ ಬಗ್ಗೆ ಬಿಜೆಪಿಯಿಂದ ಯಾವ ತಕರಾರು, ವಿರೋಧ ಇಲ್ಲ. ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂಬ ವಿಪಕ್ಷದ ನಾಯಕ ಆರ್‌. ಅಶೋಕ್‌ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ಈ ಸಂಬಂಧ “ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಶೋಕ್‌ ಅವರೇ ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ, ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ನೀವು ನುಡಿದಂತೆ ನಡೆದರೆ ಜಾತಿ ಜನಗಣತಿ ಜಾರಿಯಾಗಿ ನೀವೇ ಹೇಳಿಕೊಂಡಿರುವ ನಿಮ್ಮ ಪಕ್ಷದ ಕನಸಿನ “ಅಂತ್ಯೋದಯ’ ಸಾಕಾರಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ.

ನೀವು ಮಾತ್ರ ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದು ಅಷ್ಟೇ. 2018ರಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೂ ಅಂಕಿ-ಅಂಶಗಳ ಪರಿಶೀಲನೆ ಪೂರ್ಣಗೊಳ್ಳದೇ ಇದ್ದ ಕಾರಣ ಆ ಅವಧಿಯಲ್ಲಿ ಕಾಂತರಾಜ್‌ ಆಯೋಗದ ವರದಿಯನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಇದಕ್ಕೆ ಬೇರೆ ಯಾವ ಕಾರಣಗಳೂ ಇರಲಿಲ್ಲ. ಈಗ ವರದಿ ಬಿಡುಗಡೆಗೆ ಸಿದ್ಧವಾಗಿದೆ. ಅದನ್ನು ಅಂಗೀಕರಿಸಲು ನಮ್ಮ ಪಕ್ಷ ಮತ್ತು ಸರಕಾರ ಕೂಡ ಬದ್ಧವಾಗಿದೆ ಎಂದಿದ್ದಾರೆ.

ನಮ್ಮ ಪಕ್ಷದ ಎಲ್ಲ ನಾಯಕರು ತಾತ್ವಿಕವಾಗಿ ಜಾತಿಗಣತಿ ಒಪ್ಪಿಕೊಂಡಿದ್ದಾರೆ. ಯಾರ ವಿರೋಧವೂ ಇಲ್ಲ. ವಿಪಕ್ಷಗಳ ಸುಳ್ಳು ಪ್ರಚಾರದಿಂದಾಗಿ ಕೆಲವರಲ್ಲಿ ನಿರಾಧಾರವಾದ ಸಂಶಯಗಳು ಹುಟ್ಟಿಕೊಂಡಿವೆ. ಇನ್ನು ಕೆಲವರಲ್ಲಿ ತಪ್ಪು ಅಭಿಪ್ರಾಯಗಳಿಂದಾಗಿ ಗೊಂದಲಗಳಿವೆ. ಮಠಾಧೀಶರು ಸೇರಿದಂತೆ ಎಲ್ಲರ ಅನುಮಾನ-ಸಂಶಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಜಾತಿ ಗಣತಿ ವರದಿಯನ್ನು ಜಾರಿಗೆ ತರುವ ನಿರ್ಧಾರವನ್ನು ಶೀಘ್ರವಾಗಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next