Advertisement

Cast Census: ಜಾತಿ ಗಣತಿಗೆ ಬಿಜೆಪಿ ವಿರೋಧ, ತಕರಾರೂ ಇಲ್ಲ: ಆರ್‌.ಅಶೋಕ್‌

02:55 AM Oct 09, 2024 | Team Udayavani |

ಬೆಂಗಳೂರು: ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ ಎಂದಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 5 ಪ್ರಶ್ನೆಗಳನ್ನು ಹಾಕಿದ್ದು, ಅ.18 ರ ಸಂಪುಟ ಸಭೆಯೊಳಗಾಗಿ ಈ ಆತ್ಮಸಾಕ್ಷಿಯ ಪ್ರಶ್ನೆಗಳಿಗೆ ಆತ್ಮಾವಲೋಕನ ಮಾಡಿಕೊಂಡು ಉತ್ತರ ಕೊಡಿ ಎಂದಿದ್ದಾರೆ.

Advertisement

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿರುವ ಅವರು, ಬಿಜೆಪಿಯ ಮೂಲಸಿದ್ಧಾಂತವಾದ ‘ಅಂತ್ಯೋದಯ’ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕೆಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಕ್ರಮಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದರು.

ಆದರೆ, ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು ಹಾಗೂ ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಸಿಎಂ ಆತ್ಮಸಾಕ್ಷಿಗೆ 5 ಪ್ರಶ್ನೆ?

1. 2018ರಲ್ಲೇ ಕಾಂತರಾಜು ವರದಿಯನ್ನು ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?

Advertisement

2. ಜಾತಿ ಜನಗಣತಿ ವೈಜ್ಞಾನಿಕವಾಗಿಲ್ಲ ಎಂಬ ದೂರಿದ್ದರೂ ತರಾತುರಿ ಏಕೆ?

3. ಒಕ್ಕಲಿಗರ ಸಂಘ, ಡಿಸಿಎಂ ಡಿಕೆಶಿ, ಶಾಮನೂರು, ವಿವಿಧ ಮಠಾಧೀಶರ ವಿರೋಧವಿದ್ದರೂ ಈಗ ಏಕೆ ಸ್ವೀಕಾರ?

4. ಹಗರಣಗಳ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿ ದಾಳವೇ?

5. ರಾಜಕೀಯವಾಗಿ ಜಾತಿಗಣತಿ ಬಳಕೆಯು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ?

Advertisement

Udayavani is now on Telegram. Click here to join our channel and stay updated with the latest news.

Next