Advertisement

Cast Census: ಜಾತಿ ಗಣತಿ ವರದಿ ಸಿದ್ದರಾಮಯ್ಯ ಬರೆಸಿದ್ದಾರೆ: ಆರ್‌.ಅಶೋಕ್‌

05:06 AM Oct 10, 2024 | Team Udayavani |

ಬೆಂಗಳೂರು: ಜಾತಿ ಗಣತಿ ವರದಿಯಲ್ಲಿ ಏನಿರಬೇಕೆಂದು ಸಿಎಂ ಸಿದ್ದರಾಮಯ್ಯ ಅವರೇ ಹೇಳಿ ಬರೆಸಿದ್ದಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿದೆ. ಸಮೀಕ್ಷೆ ಮಾಡಲು ಯಾರೂ ಮನೆಗೆ ಬಂದಿಲ್ಲ ಎಂದು ಲಿಂಗಾಯತ, ಒಕ್ಕಲಿಗ ಸೇರಿದಂತೆ ಹಲವು ಸಮುದಾಯದವರು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮುಡಾ ಹಗರಣವನ್ನು ಮರೆಮಾಚಲು ಜಾತಿ ಗಣತಿ ವರದಿ ಬಿಡುಗಡೆಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ದೂರಿದರು.

Advertisement

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಬಿಜೆಪಿಯ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ ವರದಿಯಲ್ಲಿ ಏನಿರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿ ಬರೆಸಿದ್ದಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿದೆ. ಕೆಲವೇ ಜಾತಿಗಳ ವೈಭವೀಕರಣ, ಇನ್ನೂ ಕೆಲವು ಜಾತಿಗಳ ಮೇಲೆ ದ್ವೇಷ ಹಾಗೂ ಅವೈಜ್ಞಾನಿಕತೆ ಇದರಲ್ಲಿ ಕಂಡುಬಂದಿದೆ ಎಂದರು.

ಹಿಂದಿನ ಸರಕಾರಗಳು ವರದಿ ಸ್ವೀಕರಿಸಲಿಲ್ಲ ಎಂದು ಈಗ ಹೇಳುವ ಸಿಎಂ, ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೇ ಯಾಕೆ ಬಾಯಿ ಬಿಡಲಿಲ್ಲ? ಒಂದು ಕಡೆ ಮುಡಾ, ಮತ್ತೂಂದು ಕಡೆ ಜಾರಿ ನಿರ್ದೇಶನಾಲಯದ ತನಿಖೆ, ಇನ್ನೊಂದು ಕಡೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಇವೆಲ್ಲವನ್ನೂ ಮುಚ್ಚಿಹಾಕಲು ಈಗ ವರದಿಯನ್ನು ಹೊರತೆಗೆಯಲಾಗಿದೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next