Advertisement

Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್‌ ಹಾರನಹಳ್ಳಿ

03:56 AM Jan 14, 2025 | Team Udayavani |

ಬೆಂಗಳೂರು: ರಾಜ್ಯ ಸರಕಾರ ನಡೆಸಿರುವ ಜಾತಿ ಗಣತಿ (ಆರ್ಥಿಕ, ಸಾಮಾಜಿಕ, ಶೈಕ್ಷಣಿಕ) ಸಮೀಕ್ಷಾ ವರದಿಯಲ್ಲಿ ಹಲವು ಲೋಪಗಳಿದ್ದು ಸರಿಪಡಿಸುವ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಮರು ಸಮೀಕ್ಷೆ ನಡೆಸುವುದು ಅಗತ್ಯವಿದೆ ಎಂದು ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್‌ ಹಾರನಹಳ್ಳಿ ಆಗ್ರಹಿಸಿದರು.

Advertisement

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ಈಗಾಗಲೇ ಜಾತಿ ಗಣತಿ ವರದಿ ಸಲ್ಲಿಕೆಯಾಗಿದೆ. ಆದರೆ ಬ್ರಾಹ್ಮಣ ಸಮುದಾಯಕ್ಕೆ ಸಂಬಂಧಿಸಿದಂತೆ ಸರಿಯಾದ ಸಮೀಕ್ಷೆ ಆಗಿಲ್ಲ. ಅಥಣಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಮನೆ-ಮನೆಗೆ ತೆರಳಿ ಸಮೀಕ್ಷೆ ಕೈಗೊಂಡಿಲ್ಲ. ಜಾತಿ ಪಟ್ಟಿಯಲ್ಲಿ ಬ್ರಾಹ್ಮಣರ ಹೆಸರಿನ ಬದಲಾಗಿ ಒಳಪಂಗಡಗಳ ಹೆಸರನ್ನು ನಮೂದಿಸಲಾಗಿದೆ ಎಂದರು.

ಹಿಂದಿನ ಸಮಾವೇಶಗಳಲ್ಲಿ ಮುಖ್ಯಮಂತ್ರಿಯೊಬ್ಬರು ಸಮುದಾಯಕ್ಕೆ 5 ಕೋಟಿ ರೂ. ಭರವಸೆ ನೀಡಿದ್ದರು. ಈವರೆಗೂ ಪಡೆಯಲು ಸಾಧ್ಯವಾಗಿಲ್ಲ. ಸಮುದಾಯದಲ್ಲಿರುವ ಶ್ರೀಮಂತರೇ ಹಿಂದುಳಿದ ಬಡ ಸಮುದಾಯಕ್ಕೆ ನೆರವಾಗಬೇಕು ಎಂದು ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.