Advertisement
ಕಾಂತರಾಜ್ ವರದಿ ತಿರಸ್ಕರಿಸಬೇಕೆಂದು ಒಕ್ಕಲಿಗರ ಸಂಘ ನಡೆಸಿರುವ ಸಹಿ ಅಭಿ ಯಾನ ದಲ್ಲಿ ಡಿಸಿಎಂ ಶಿವಕುಮಾರ್, ಸಚಿವ ರಾದ ರಾಮಲಿಂಗಾ ರೆಡ್ಡಿ, ಎಂ.ಸಿ. ಸುಧಾಕರ್, ಚಲುವರಾಯಸ್ವಾಮಿ ಸಹಿತ ಕಾಂಗ್ರೆಸ್ ಶಾಸಕರು ಪಾಲ್ಗೊಂಡಿದ್ದಾರೆ. ಆದರೆ “ಆಯೋಗದ ವರದಿ ಸ್ವೀಕರಿಸಿ, ಅವಕಾಶ ವಂಚಿತ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲ’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
Related Articles
ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅಧಿಕಾರಾವಧಿ ನ. 25ಕ್ಕೆ ಅಂತ್ಯಗೊಳ್ಳಲಿದೆ. ಹಿಂದಿನ ಅಧ್ಯಕ್ಷ ಕಾಂತರಾಜು ನೇತೃತ್ವದಲ್ಲಿ ನಡೆದಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಅಷ್ಟರೊಳಗೆ ಸರಕಾರಕ್ಕೆ ಸಲ್ಲಿಸಬೇಕಿದೆ. ನ. 25 ನಾಲ್ಕನೇ ಶನಿವಾರ ಆಗಿದ್ದು, ನ. 24 ಹೆಗ್ಡೆ ಅವರ ಕರ್ತವ್ಯದ ಕೊನೆಯ ದಿನವಾದ್ದರಿಂದ ಅಂದೇ ಸಲ್ಲಿಸಿದರೂ ಅಚ್ಚರಿಯಿಲ್ಲ. ಆದರೆ ಆಯೋಗದ ವರದಿ ಸಲ್ಲಿಕೆಗೆ ತಾಂತ್ರಿಕ ಅಡಚಣೆಗಳು ಸಾಕಷ್ಟಿದ್ದು, ಈ ಹಿಂದೆ ಕಾಂತರಾಜು ಅಧ್ಯಕ್ಷರಾಗಿದ್ದಾಗಲೇ ವರದಿ ಸಿದ್ಧವಾಗಿತ್ತಾದರೂ ಸದಸ್ಯ ಕಾರ್ಯದರ್ಶಿ ಸಹಿ ಮಾಡದ್ದರಿಂದ ಸರಕಾರಕ್ಕೆ ಸಲ್ಲಿಸಿರಲಿಲ್ಲ. ಅದೇ ವರದಿಯನ್ನು ಜಯಪ್ರಕಾಶ್ ಹೆಗ್ಡೆ ಅವರು ಕೊಂಚ ಬದಲಿಸಿರುವುದಾಗಿ ಹೇಳಿದ್ದು, ಈಗಿನ ಸದಸ್ಯ ಕಾರ್ಯದರ್ಶಿಯೂ ಸಹಿ ಮಾಡದೆ ಇದ್ದರೆ ತಾಂತ್ರಿಕವಾಗಿ ವರದಿಗೆ ಮಾನ್ಯತೆ ಸಿಗುವುದು ಕಷ್ಟ. ಇದೇ ನೆಪವೊಡ್ಡಿ ಜಯಪ್ರಕಾಶ್ ಹೆಗ್ಡೆ ವರದಿ ಸಲ್ಲಿಕೆ ಮಾಡದೆ ಇದ್ದರೆ ಹೊಣೆ ಹೊಸ ಅಧ್ಯಕ್ಷರ ಹೆಗಲಿಗೇರುವ ಎಲ್ಲ ಲಕ್ಷಣಗಳೂ ಇವೆ.
Advertisement
ಒಪ್ಪಿಕೊಳ್ಳದಿರಲು ಆಗ್ರಹಕರ್ನಾಟಕ ಹಿಂದುಳಿದ ವರ್ಗ ಗಳ ಆಯೋಗದ ಅಧ್ಯಕ್ಷ ಎಚ್. ಕಾಂತ ರಾಜು ಅವಧಿಯಲ್ಲಿ ಸಂಗ್ರಹಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2014-15ರ ದತ್ತಾಂಶ ಮತ್ತು ವರದಿಯನ್ನು ತಿರಸ್ಕರಿಸುವಂತೆ ರಾಜ್ಯ ಒಕ್ಕಲಿಗರ ಸಂಘ ಹಾಗೂ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯು ಸಿಎಂಗೆ ಪತ್ರ ಬರೆದಿದೆ. ಈ ಸಹಿ ಸಂಗ್ರಹ ಅಭಿಯಾನಕ್ಕೆ ಆದಿಚುಂಚನಗಿರಿ ಮಠದ ಡಾ| ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಗುರುಗುಂಡ ಬ್ರಹೆ¾àಶ್ವರ ಮಠದ ಡಾ| ಶ್ರೀನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಶ್ರೀಕುಮಾರಚಂದ್ರ ಶೇಖರಾನಂದನಾಥ ಸ್ವಾಮೀಜಿ, ಸಂಘದ ಅಧ್ಯಕ್ಷ ಡಿ. ಹನುಮಂತಯ್ಯ, ಸಮಿತಿ ಅಧ್ಯಕ್ಷ ಗಾ.ನಂ. ಶ್ರೀಕಂಠಯ್ಯ, ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ ಸಹಿತ ಹಲವರು ಬೆಂಬಲ ನೀಡಿದ್ದಾರೆ. ಅಲ್ಲದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಸ್.ಎಂ. ಕೃಷ್ಣ, ಡಿ.ವಿ. ಸದಾನಂದ ಗೌಡ, ಎಚ್.ಡಿ. ಕುಮಾರಸ್ವಾಮಿ, ಮಾಜಿ ಡಿಸಿಎಂ ಡಾ| ಅಶ್ವತ್ಥನಾರಾಯಣ, ಹಾಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಪಕ್ಷ ನಾಯಕ ಆರ್. ಅಶೋಕ್, ಸಚಿವರಾದ ರಾಮಲಿಂಗಾರೆಡ್ಡಿ, ಎಂ.ಸಿ. ಸುಧಾಕರ್, ಚಲುವರಾಯಸ್ವಾಮಿ, ಕಾಂಗ್ರೆಸ್ ಶಾಸಕರಲ್ಲಿ ಕೆಲವರು, ಸಂಸದರಾದ ಬಿ.ಎನ್. ಬಚ್ಚೇಗೌಡ, ರಾಜ್ಯಸಭಾ ಸದಸ್ಯ ಜೆ.ಸಿ. ಚಂದ್ರಶೇಖರ್, ಕೆಲವು ಮೇಲ್ಮನೆ ಸದಸ್ಯರು ಸಹಿ ಮಾಡಿದ್ದಾರೆ. ಈ ಪತ್ರವನ್ನು ಸಿಎಂ ಅವರಿಗೆ ತಲುಪಿಸುವಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರೇ ನೇತೃತ್ವ ವಹಿಸಿದ್ದು ಅಚ್ಚರಿ ಹುಟ್ಟಿಸಿದೆ. ಟ್ವೀಟ್‌ನಲ್ಲಿ ಸಿಎಂ ಬರೆದುಕೊಂಡದ್ದೇನು?
“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಡುವ ಮೊದಲ ಕೆಲಸ ಜಾತಿಗಣತಿ ಪ್ರಕ್ರಿಯೆಗೆ ಚಾಲನೆ. ಜಾತಿಗಣತಿ ನಡೆಸಿದಾಗಲೇ ಭಾರತ ಮಾತೆಗೆ ಜಯ’ ಎನ್ನುವ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಸಿಎಂ ಪೋಸ್ಟ್ ಮಾಡಿದ್ದಾರೆ. “ನಮ್ಮ ಹೆಮ್ಮೆಯ ನಾಯಕರಾದ ರಾಹುಲ್ ಗಾಂಧಿ ಅವರ ನಿಲುವಿಗೆ ನನ್ನ ಪೂರ್ಣ ಸಹಮತವಿದೆ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ ಸರ್ವರಿಗೂ ಸಮಪಾಲು- ಸರ್ವರಿಗೂ ಸಮಬಾಳು ಎನ್ನುವುದು ನನ್ನ ಭಾವನೆ. ನಮ್ಮ ಸರಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನಿರ್ಧಾರ ಅಚಲವಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.