Advertisement

Caste Census : ಒಕ್ಕಲಿಗರ ಸಂಘ ಮನವಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

04:20 PM Nov 22, 2023 | Team Udayavani |

ಬೆಂಗಳೂರು: ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

Advertisement

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು ಜಾತಿ ಜನಗಣತಿ ವರದಿ ತಿರಸ್ಕರಿಸಬೇಕೆಂದು ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ”ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

”ಮೂಲಪ್ರತಿ ಕಾಣೆಯಾಗಿದೆ” ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ”ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು. ನನ್ನನ್ನು ಭೇಟಿಯಾಗಿ ವರದಿ ಸಲ್ಲಿಸುತ್ತಾರೆ ಎಂದು ತಿಳಿಸಿದರು. ಅಲ್ಲಿಯವರೆಗೆ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದರು” ಎಂದರು.

”ವರದಿ ಯಾವಾಗ ಕೊಡುತ್ತಾರೋ ಅಲ್ಲಿಯವರೆಗೆ ಅವಧಿ ವಿಸ್ತರಣೆಯಾಗುತ್ತದೆ. 162 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಂದ ನಂತರ ಅವರ ಸಂಶಯಗಳ ನಿವಾರಣೆಯಾಗಲಿದೆಯೋ ಇಲ್ಲವೋ ನೋಡೋಣ . ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ಡಿಸೆಂಬರ್ ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ” ಎಂದರು.

”ಡಿಸಿಎಂ ನನ್ನೊಂದಿಗೆ ಈ ಬಗ್ಗೆ ಏನನ್ನೂ ಮಾತನಾಡಿಲ್ಲ” ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು.

Advertisement

”ನಿಗಮಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಚರ್ಚೆಯಾಗಿದ್ದು ಯಾರನ್ನು ಮಾಡಬೇಕೆಂಬ ಬಗ್ಗೆ ಅಂತಿಮಗೊಳಿ ಸಿಲ್ಲ” ಎಂದರು.

Advertisement

Udayavani is now on Telegram. Click here to join our channel and stay updated with the latest news.

Next