Advertisement
ಇಲ್ಲಿನ ಸದಾಶಿವ ನಗರದಲ್ಲಿರುವ ವೀರಶೈವ ಮಹಾಸಭಾದ ಕಚೇರಿಯಲ್ಲಿ ಗುರುವಾರ ನಡೆದ ಅಖೀಲಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಭೆಯಲ್ಲಿ ಜಾತಿಗಣತಿ ವಿರೋಧಿಸಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಇದನ್ನು ಮನೆಯಲ್ಲೇ ಕುಳಿತು ತಯಾರಿಸಲಾಗಿದೆ ಎಂದು ಆರೋಪಿಸಿದೆ. ಸಭೆ ಬಳಿಕ ಮಾತನಾಡಿದ ಅಖೀಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ಈ ಜಾತಿಗಣತಿ ಸಮೀಕ್ಷೆಯೇ ಸಮರ್ಪಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಭೇಟಿಯನ್ನು ನೀಡದೆ ವರದಿ ಸಿದ್ಧಪಡಿಸಲಾಗಿದೆ ಎಂಬ ದೂರುಗಳು ಬಂದಿವೆ. ಈ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನ ಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಇದರಿಂದ ಸಮಾಜಕ್ಕೆ ತೀವ್ರ ಸ್ವರೂಪದ ನಷ್ಟವಾಗಲಿದೆ ಎಂದು ಆಕ್ಷೇಪಿಸಿದರು.
Related Articles
Advertisement
ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸರಕಾರಕ್ಕೆ ಮೊದಲು ವರದಿ ಕೊಡಲಿ, ಮುಂದೆ ನೋಡೋಣ. ಆದರೆ ನಾವು ಪ್ರಸ್ತುತ ಇರುವ ಕಾಂತರಾಜು ಆಯೋಗದ ವರದಿಯನ್ನು ಒಪ್ಪುವುದಿಲ್ಲ. ಪ್ರತಿ ವ್ಯಕ್ತಿಯ ಆಧಾರ್ ಕಾರ್ಡ್ ಮುಂದಿಟ್ಟುಕೊಂಡು ವರದಿ ಸಿದ್ಧಪಡಿಸಬೇಕು. ಸರಕಾರ ಈ ಬಗ್ಗೆ ವಿವೇಚಣೆಯಿಂದ ಮತ್ತೂಮ್ಮೆ ಪರಾಮರ್ಶೆ ಮಾಡಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. “ಈ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವಿರಾ’ ಎಂಬ ಪ್ರಶ್ನೆಗೆ, “ನಾವು ಯಾರೂ ಸಿಎಂ ಭೇಟಿಗೆ ಹೋಗುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.