Advertisement

ಕೋಟೆಮನೆ ರಸ್ತೆ: ಸಂಚಾರಕ್ಕೆ ದುಸ್ತರ

08:41 PM Jul 19, 2017 | Team Udayavani |

ಬೈಂದೂರು: ಶಿರೂರು ಸಂಕದಗುಂಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಿಂದ ಕೋಟೆಮನೆ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸಂಚಾರಕ್ಕೆ ದುಸ್ತರವಾಗಿದೆ. 

Advertisement

ಕಳೆದ ಮೂರು ವರ್ಷಗಳಿಂದ ಈ ರಸ್ತೆಯ ಸುಧಾರಣೆಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿರಲಿಲ್ಲ. ಪ್ರಸಿದ್ಧ ಕೋಟೆಮನೆ ದುರ್ಗಾಂಬಿಕಾ ದೇವಸ್ಥಾನವಿರುವ ಕಾರಣ ಕುಂದಾಪುರದಿಂದ ಕಾರವಾರದವರೆಗೆ ಭಕ್ತರು ನಿತ್ಯ ಆಗಮಿಸುತ್ತಾರೆ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯುದ್ದಕ್ಕೂ ನೀರಿನಿಂದಾವೃತವಾಗುತ್ತಿದ್ದು, ಜನತೆ ನಿತ್ಯ ಪರದಾಡಬೇಕಾಗಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಇಲಾಖೆ, ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದೇವೆ.  ರಸ್ತೆಯನ್ನು ಶೀಘ್ರ ದುರಸ್ತಿ ಮಾಡಬೇಕು ಎಂದು ಸ್ಥಳೀಯರಾದ ವಿವೇಕ ಮೇಸ್ತ ಅವರು ಮನವಿ ಮಾಡಿದ್ದಾರೆ. ಹೀಗಾಗಿ ಪ್ರತಿದಿನ ನೂರಾರು ವಾಹನ ಸಂಚರಿಸುವ ಪ್ರಮುಖ ರಸ್ತೆ ದುರಸ್ತಿಗೆ ಸಂಬಂಧಪಟ್ಟ ಇಲಾಖೆ ಈ ಕುರಿತು ಗಮನಹರಿಸಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next