Advertisement
ಸರ್ಕಾರ ಕಾನೂನು ಬದ್ಧವಾಗಿಯೇ ವರ್ಗಾವಣೆ ಮಾಡಿದೆ ಎಂದು ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೊನ್ನಣ್ಣ ಅವರು ವಾದ ಮಂಡಿಸಿದರು. ಪೊನ್ನಣ್ಣ ವಾದಕ್ಕೆ ಮಾನ್ಯತೆ ನೀಡಿ ಸಿಂಧೂರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ.
Related Articles
Advertisement
ಎ ಮಂಜು ವಿರುದ್ಧ ಸಮರ
ಚುನಾವಣೆ ಘೋಷಣೆ ನಂತರ ನೀತಿ ಸಂಹಿತೆ ಜಾರಿಯಲ್ಲಿರುವಾಗ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನಿಯಮಬಾಹಿರವಾಗಿ ಕೆಲಸ ನಡೆಯುತ್ತಿದೆ ಎಂದು ಸ್ವತಃ ಜಿಲ್ಲಾಧಿಕಾರಿಯೇ, ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.ಅದಾದ ಬಳಿಕ ಎ.ಮಂಜು ಅವರು, ಜಿಲ್ಲಾಧಿಕಾರಿ ದುರುದ್ದೇಶದಿಂದ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಜಿಲ್ಲಾಧಿಕಾರಿ ವರ್ಗ ಮಾಡುವಂತೆ ಕೋರಿ ಚುನಾವಣಾ ಆಯೋಗಕ್ಕೆ ಏ.7ರಂದು ದೂರು ಸಲ್ಲಿಸಿದ್ದರು. ಈ ಸಂಬಂಧ ಚುನಾವಣಾ ಆಯೋಗ ಮೈಸೂರು ಪ್ರಾದೇಶಿಕ ಆಯುಕ್ತರ ವರದಿ ಕೇಳಿತ್ತು. ವಿಚಾರಣೆ ನಡೆಸಿದ ಮೈಸೂರು ಪ್ರಾದೇಶಿಕ ಆಯುಕ್ತ ಶಿವಯೋಗಿ ಎನ್.ಕಳಸದ್, ಸಚಿವರು ರೋಹಿಣಿ ಸಿಂಧೂರಿ ವಿರುದ್ಧ ನೀಡಿರುವ ದೂರಿನಲ್ಲಿ ಯಾವುದೇ ಹುರುಳಿಲ್ಲ. ಇದೊಂದು ಆಧಾರ ರಹಿತ ಆರೋಪ ಎಂದು ವರದಿಯಲ್ಲಿ ಹೇಳಿದ್ದರು.
ರೋಹಿಣಿ ಸಿಂಧೂರಿ ಅವರನ್ನು ಮೈಸೂರಿಗೆ, ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ರಂದೀಪ್ ಡಿ.ಅವರನ್ನು ಹಾಸನಕ್ಕೆ ಸರ್ಕಾರ ವರ್ಗಾಯಿಸಿತ್ತು.
ಸರ್ಕಾರದ ಆದೇಶದ ವಿರುದ್ಧ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಮೆಟ್ಟಿಲೇರಿದ ರೋಹಿಣಿ ಸಿಂಧೂರಿ ಅವರು ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ತಂದು ಹಾಸನದಲ್ಲೇ ಉಳಿದುಕೊಂಡಿದ್ದರು.