Advertisement

ರೋಹಿಣಿ ಸಿಂಧೂರಿ ವರ್ಗಾವಣೆ ಎತ್ತಿಹಿಡಿದ ಸಿಎಟಿ

06:45 AM Apr 18, 2018 | |

ಬೆಂಗಳೂರು:ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೊಳಿಸಿದ್ದ ರಾಜ್ಯಸರ್ಕಾರದ ಆದೇಶವನ್ನು ಕೆಂದ್ರೀಯ ಆಡಳಿತ ನ್ಯಾಯಮಂಡಳಿ (ಸಿಎಟಿ) ಎತ್ತಿಹಿಡಿದಿದೆ.

Advertisement

ಈ ಕುರಿತು ಮಂಗಳವಾರ ತೀರ್ಪು ಪ್ರಕಟಿಸಿದ ಸಿಎಟಿ, ವರ್ಗಾವಣೆ ಆದೇಶ ಪ್ರಶ್ನಿಸಿ  ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ರಾಜ್ಯಸರ್ಕಾರ ಮಾರ್ಚ್‌ 7ರಂದು ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿಯಿತು.

ಆಡಳಿತಾತ್ಮಕ ದೃಷ್ಟಿಯಿಂದ ರೋಹಿಣಿ  ಸೇರಿದಂತೆ ಇನ್ನೂ ಹಲವು ಮಂದಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿತ್ತು, ಇದರಲ್ಲಿ ಯಾವುದೇ ದುರುದ್ದೇಶವಿರಲಿಲ್ಲ ಎಂಬ ಸರ್ಕಾರದ ವಾದವನ್ನು ನ್ಯಾಯಪೀಠ ಮಾನ್ಯ ಮಾಡಿದೆ.

ಸಿಎಟಿ ತೀರ್ಪು ಪ್ರಶ್ನಿಸಿ ರೋಹಿಣಿ ಸಿಂಧೂರಿ ಮತ್ತೂಮ್ಮೆ ಹೈಕೋರ್ಟ್‌ ಮೊರೆಹೋಗುವ ಸಾಧ್ಯತೆಯಿದೆ. ಈ ಹಿಂದೆ ಮುಖ್ಯಕಾರ್ಯದರ್ಶಿಗಳಿಗೆ ಮನವಿ ನೀಡುವಂತೆ ನಿರ್ದೇಶಿಸಿದ್ದ ಸಿಎಟಿ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದ್ದ ಹೈಕೋರ್ಟ್‌, ಈ ಪ್ರಕರಣವನ್ನು ಸಿಎಟಿಯೇ ನಿರ್ಧರಿಸಲಿ ಎಂದು ಹೇಳಿತ್ತು.

ಪ್ರಕರಣವೇನು?
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ರಾಜ್ಯ ಕೈಗಾರಿಕಾ ನಿಗಮ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ನಿರ್ದೇಶಕಿ  ಸ್ಥಾನಕ್ಕೆ ವರ್ಗಾವಣೆಗೊಳಿಸಿ ಜ.22ರಂದು ಆದೇಶಿಸಿತ್ತು. ಈ ಆದೇಶಕ್ಕೆ ಕೇಂದ್ರ ಚುನಾವಣಾ ಆಯೋಗ ತಡೆ ನೀಡಿತ್ತು. ಇದಾದ ಬಳಿಕ  ಮಾರ್ಚ್‌ 7ರಂದು  ರೋಹಿಣಿ ಸಿಂಧೂರಿ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next