ಮಂಡ್ಯ: ಜಿಲ್ಲೆಯ ಹೋಬಳಿಯ ದೊಡ್ಡಸೋಮನಹಳ್ಳ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆ ಸೆರೆಯಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಕೆ.ಆರ್.ಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ದೊಡ್ಡಸೋಮನಹಳ್ಳ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿದೆ.
ಈ ಭಾಗದಲ್ಲಿ ಹಲವು ದಿನಗಳಿಂದ ಚಿರತೆ ಉಪಟಳದಿಂದ ಗ್ರಾಮಸ್ಥರು ಆತಂಕದಲ್ಲಿದ್ದರು. ಇದರಿಂದ ಬೋನು ಇರಿಸಿ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರು.
ಅದರಂತೆ ಅರಣ್ಯ ಇಲಾಖೆಯಿಂದ ಬೋನು ಇರಿಸಲಾಗಿತ್ತು. ಶುಕ್ರವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ:Covid19 ದೇಶದಲ್ಲಿ ಇಳಿಕೆ, ರಾಜ್ಯದಲ್ಲಿ ಏರಿಕೆ: ಮುಚ್ಚಿಟ್ಟಿದ್ದೇ ಇಂದು ನಮಗೆ ಮುಳುವಾಯಿತೇ?
ಅರಣ್ಯಾಧಿಕಾರಿ ಭರತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಚಿರತೆಯನ್ನು ಕಾಡಿಗೆ ಬಿಡಲು ತೆಗೆದುಕೊಂಡು ಹೋಗಲಾಯಿತು. ಚಿರತೆ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿದ್ದರು.