Advertisement

ತೆಕ್ಕಟ್ಟೆ : ಸಂಪೂರ್ಣ ನಿರ್ಲಕ್ಷಕ್ಕೆ ಒಳಗಾದ ಪಠೇಲರ ಮನೆ ಸಂಪರ್ಕ ರಸ್ತೆ

10:53 PM May 22, 2019 | Team Udayavani |

ತೆಕ್ಕಟ್ಟೆ: ಇಲ್ಲಿನ ತೆಕ್ಕಟ್ಟೆ ಗ್ರಾ.ಪಂ. ವ್ಯಾಪ್ತಿಯ ರಾ.ಹೆ.66 ರಿಂದ ತೆಕ್ಕಟ್ಟೆ ಪಠೇಲರಮನೆ , ಮಾಲಾಡಿ ಸರಕಾರಿ ಶಾಲೆ ಹಾಗೂ ಮಲ್ಯಾಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗ್ರಾ.ಪಂ. ರಸ್ತೆ ಸಂಪೂರ್ಣ ಹದಗೆಟ್ಟು ನಿರ್ಲಕ್ಷéಕ್ಕೆ ಒಳಗಾಗಿದೆ.

Advertisement

ಗ್ರಾಮದ ಸುಮಾರು 150ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಡಾಮರು ಸಂಪೂರ್ಣ ಕಿತ್ತು ಹೋಗಿದೆ.ಇದರಿಂದಾಗಿ ಸಾರ್ವಜನಿಕ ಸಂಚಾರ ವ್ಯವಸ್ಥೆಯೂ ದುಸ್ತರವಾಗಿ ಪರಿಣಮಿಸಿದೆ.

ಈ ಬಗ್ಗೆ ಕೂಡಲೇ ಸಂಬಂಧಪಟ್ಟ ಸ್ಥಳೀಯಾಡಳಿತ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಅವಿನಾಶ್‌ ಶೆಟ್ಟಿ ಪಠೇಲರ ಮನೆ ಸೇರಿದಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next