ತಿರುವನಂತಪುರಂ : ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿದ್ದ ಕೇರಳದ ಧರ್ಮಪ್ರಚಾರಕಿ (ನನ್ ) ಅತ್ಯಾಚಾರದ ಪ್ರಕರಣದ ಅಂತಿಮ ತೀರ್ಪು ಶುಕ್ರವಾರ (ಜನವರಿ 14) ಪ್ರಕಟಗೊಂಡಿದ್ದು ನ್ಯಾಯಾಲಯವು ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೋ ಮುಲಕ್ಕಲ್ ಅವರನ್ನು ಅತ್ಯಾಚಾರ ಆರೋಪದಿಂದ ಖುಲಾಸೆಗೊಳಿಸಿದೆ.
ಆರೋಪಿಗಳ ವಿರುದ್ಧ ಸಾಕ್ಷ್ಯವನ್ನು ಸಲ್ಲಿಸಲು ಪ್ರಾಸಿಕ್ಯೂಷನ್ ವಿಫಲವಾದ ಕಾರಣ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ II ಬಿಷಪ್ ಅವರನ್ನು ಖುಲಾಸೆಗೊಳಿಸಿದೆ.
೨೦೧೪ರಿಂದ ೨೦೧೬ರ ಅವಧಿಯಲ್ಲಿ ಕೊಟ್ಟಾಯಂನಲ್ಲಿ ಬಿಷಪ್ ಫ್ರಾಂಕೋ ಮುಳಾಕಲ್ ಎಂಬುವರು ತಮ್ಮ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು ನನ್ ಒಬ್ಬರು ಆರೋಪಿಸಿದ್ದರು. ಈ ಪ್ರಕರಣ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು. , 100 ಕ್ಕೂ ಹೆಚ್ಚು ಪೊಲೀಸರು ಹಾಗೂ ಬಾಂಬ್ ನಿಷ್ಕ್ರೀಯ ದಳವನ್ನು ನಿಯೋಜಿಸಲಾಗಿತ್ತು.
57 ವರ್ಷದ ಮುಲಕ್ಕಲ್ ಅವರು ರೋಮನ್ ಕ್ಯಾಥೋಲಿಕ್ ಚರ್ಚ್‌ನ ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿದ್ದಾಗ ಈ ಜಿಲ್ಲೆಯ ಕಾನ್ವೆಂಟ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸನ್ಯಾಸಿನಿಯ ಮೇಲೆ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿತ್ತು.
Related Articles
2018 ರಲ್ಲಿ ತಾವು ಕೆಲಸ ಮಾಡುತ್ತಿದ್ದ ಕಾನ್ವೆಂಟ್‌ಗೆ ರಾತ್ರಿ ಆಗಮಿಸಿದ ಬಿಷಪ್ ತಮ್ಮನ್ನು ಕೊಠಡಿಗೆ ಕರೆದು ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿzದ್ದರು. ನಿರಾಕರಿಸಿದ್ದಕ್ಕೆ ಬಲವಂತವಾಗಿ ಅತ್ಯಾಚಾರ ನಡೆಸಿದ್ದರು. ಒಟ್ಟು 12 ಭಾರಿ ಅತ್ಯಾಚಾರ ನಡೆಸಿದ್ದರು ಎಂದು ನನ್ ಆರೋಪಿಸಿದ್ದರು.
ಈ ಘಟನೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರಿ ಪ್ರತಿಭಟನೆ ನಡೆದಿತ್ತುಕ್ರೈಸ್ತ ಸನ್ಯಾಸಿಗಳು ಹಾಗೂ ಧರ್ಮಾನುಯಾಯಿಗಳು ಕ್ರಮಕ್ಕೆ ಆಗ್ರಹಿಸಿ ಭಾರಿ ಪ್ರತಿಭಟನೆ ನಡೆಸಿದ್ದರು. 2018ರಲ್ಲಿ ಬಿಷಪ್ ಫ್ರಾಂಕ್ ಅವರನ್ನು ಬಂಧಿಸಲಾಗಿತ್ತು. ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾದ ಮೊದಲ ಕ್ಯಾಥಲಿಕ್ ಬಿಷಪ್ ಅವರಾಗಿದ್ದರು.