ಕೊಪ್ಪ: ರಾಜ್ಯದಲ್ಲಿ ಗೋ ಹತ್ಯಾ ನಿಷೇಧ ಕಾಯ್ದೆಯನ್ನು ಕಠಿಣವಾಗಿ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲೆನಾಡು ಸೇರಿ ರಾಜ್ಯದ ಕೆಲ ಭಾಗದಲ್ಲಿ ಅಕ್ರಮ ಗೋ ಸಾಗಾಟ ನಡೆಯುತ್ತಿರುವ ವಿಷಯ ಗಮನದಲ್ಲಿದೆ. ಇದನ್ನು ತಡೆಯಲು ಗೋಹತ್ಯಾ ನಿಷೇಧ ಕಾಯ್ದೆ ಕಠಿಣ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪೊಲೀಸ್ ಇಲಾಖೆಯ ಔರಾದ್ಕರ್ ವರದಿ ಬಗ್ಗೆ ಪರಿಶೀಲನೆ ನಡೆಸಿ ಎಲ್ಲರಿಗೂ ಒಳ್ಳೆಯದಾಗುವಂತೆ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ಟ್ರಕ್ ಚಾಲಕರಿಗೆ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಚಾನು ವಿಶೇಷ ಉಡುಗೊರೆ | ಯಾಕೆ ಗೊತ್ತಾ ?
ತೀರ್ಥಹಳ್ಳಿಯಲ್ಲಿ ಈ ಹಿಂದೆ ನಡೆದಿದ್ದ ವಿದ್ಯಾರ್ಥಿನಿ ನಂದಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳನ್ನು ನಾಶ ಮಾಡಲಾಗಿದೆ. ಸಿಒಡಿ ತನಿಖೆ ನಡೆಸಿ “ಬಿ’ ರಿಪೋರ್ಟ್ ಸಲ್ಲಿಸಲಾಗಿದೆ. ಈ ಪ್ರಕರಣದ ತನಿಖೆ ಕುರಿತು ಯೋಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಸಂಘ ಪರಿ
ವಾರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ಈ ಹಿಂದೆ ದಾಖಲಾಗಿರುವ ಕೇಸ್‌ಗಳನ್ನು ಹಿಂಪಡೆ ಯುವ ವಿಚಾರದಲ್ಲಿ ಗಮನಹರಿಸಲಾಗುವುದು ಎಂದರು.