Advertisement

ರಾಜಸ್ಥಾನ: ಬಾಲಕಿಯ ಮೇಲೆ ರೇಪ್ ನಡೆಸುತ್ತಿದ್ದಾಗಲೇ ಪೊಲೀಸರಿಂದ ಬಂಧನ!

05:06 PM Feb 14, 2022 | Team Udayavani |

ಜೈಪುರ: ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಸಿಕ್ಕಿಬಿದ್ದ 50 ವರ್ಷದ ವ್ಯಕ್ತಿಯನ್ನು ಪೊಲೀಸ್ ಪೇದೆಯೊಬ್ಬರು ಸಮಯಪ್ರಜ್ಞೆಯಿಂದ ಬಂಧಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

Advertisement

ಕಾನ್ಸ್‌ಟೇಬಲ್ ಲಾಭುರಾಮ್ ಅವರು ಕೆಲವು ದಿನಗಳ ಹಿಂದೆ ಸಿರೋಹಿಯ ಅಭಯ್ ಕಮಾಂಡ್ ಸೆಂಟರ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬ ಸಂತ್ರಸ್ತೆಯನ್ನು ಹೊತ್ತುಕೊಂಡು ತನ್ನ ಮೋಟಾರ್‌ಸೈಕಲ್‌ನಲ್ಲಿ ಅನುಮಾನಾಸ್ಪದವಾಗಿ ಚಲಿಸುತ್ತಿರುವ ದೃಶ್ಯಾವಳಿಗಳ ಮೇಲೆ ಕಣ್ಣಿಟ್ಟರು.

ಅನುಮಾನಿಸಿ, ಲಾಭುರಾಮ್ ಇತರ ಕ್ಯಾಮೆರಾಗಳಿಂದ ಮೋಟಾರ್‌ಸೈಕಲ್‌ನ ಲೈವ್ ದೃಶ್ಯಗಳನ್ನು ಪರಿಶೀಲಿಸಿದರು ಮತ್ತು ಆರೋಪಿ ಮತ್ತೊಂದು ಸ್ಥಳದಲ್ಲಿ ಹುಡುಗಿಗೆ ಕಿರುಕುಳ ನೀಡುವುದನ್ನು ಗಮನಿಸಿದರು.

ಕೂಡಲೇ ಅವರು ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿಗಳ ಗಮನಕ್ಕೆ ಘಟನೆಯನ್ನು ತಂದರು. ಕೇವಲ ನಾಲ್ಕೇ ನಿಮಿಷಗಳಲ್ಲಿ, ಗಸ್ತು ತಿರುಗುವ ವಾಹನವು ಸ್ಥಳಕ್ಕೆ ತಲುಪಿತು ಮತ್ತು ಬಾಲಕಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದ ವ್ಯಕ್ತಿಯನ್ನು ಹಿಡಿಯಲಾಗಿದೆ ಎಂದು ಸಿರೋಹಿ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಸಿಂಗ್ ಸೋಮವಾರ ತಿಳಿಸಿದ್ದಾರೆ.

ಆರೋಪಿ ಮತ್ತು ಸಂತ್ರಸ್ತೆಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಬಾಲಕಿಯ ಕುಟುಂಬಸ್ಥರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಪೋಕ್ಸೊ ಕಾಯ್ದೆಯಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next