ಮಹಾರಾಷ್ಟ್ರ: ಆಸ್ಪತ್ರೆಯೊಳಗೆ ವೈದ್ಯರೊಬ್ಬರು ನಗ್ನವಾಗಿ ಓಡಾಡಿರುವ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ವೈದ್ಯ ನಗ್ನವಾಗಿ ತಿರುಗಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕುಡಿದ ಅಮಲಿನಲ್ಲಿ ವೈದ್ಯ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ವೈದ್ಯ ಮಾದಕ ವ್ಯಸನಿಯಾಗಿದ್ದು, ಔರಂಗಾಬಾದ್‌ನಿಂದ 20 ಕಿಮೀ ದೂರದಲ್ಲಿರುವ ಬಿಡ್ಕಿನ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
ವೈದ್ಯ ಆಸ್ಪತ್ರೆಯ ಕಾರಿಡಾರ್‌ನಲ್ಲಿ ಬಟ್ಟೆಯ ತುಂಡನ್ನು ಬೀಸುತ್ತಿರುವುದನ್ನು ಕಾಣಬಹುದು, ವಾಶ್‌ರೂಮ್‌ನ ಒಳಗೆ ಹೋಗುವ ಮೊದಲು, ಅದರ ಬಾಗಿಲು ತೆರೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಕುರಿತು ವೈದ್ಯಕೀಯ ಅಧೀಕ್ಷಕರಿಗೆ ದೂರು ನೀಡಿದ್ದು, ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಛತ್ರಪತಿ ಸಂಭಾಜಿನಗರ ಜಿಲ್ಲೆಯ ಆರೋಗ್ಯ ಸೇವೆಗಳ ಮುಖ್ಯಸ್ಥರಾಗಿರುವ ಡಾ ದಯಾನಂದ ಮೋತಿಪಾವ್ಲೆಹೇಳಿದ್ದಾರೆ.