Advertisement

ಕಾವೇರಿ ನೀರು ಬಿಡಲು ಸಾಧ್ಯವಿಲ್ಲ

12:31 PM May 05, 2018 | Team Udayavani |

ತಿ.ನರಸೀಪುರ: ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಇರುವುದರಿಂದ ಸುಪ್ರೀಂಕೋರ್ಟ್‌ ತೀರ್ಪಿನಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು.

Advertisement

ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಪಾದಯಾತ್ರೆ ನಡೆಸಿ ಮತಯಾಚಿಸಿದ ಮಾತನಾಡಿದ ಅವರು, ಸತತ ಮೂರ್‍ನಾಲ್ಕು ವರ್ಷಗಳಿಂದ ಮಳೆ ಬೀಳದ್ದರಿಂದ ಕೃಷಿಗಿರಲಿ, ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲ ಸಂಕಷ್ಟದಲ್ಲಿ ನಾವಿದ್ದೇವೆ. ಇಂತಹ ಸಂದರ್ಭದಲ್ಲಿ ನೆರೆಯ ರಾಜ್ಯಕ್ಕೆ ನೀರು ಹರಿಸುವುದು ಕಷ್ಟವಾದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದರು.

ರಾಜ್ಯದಲ್ಲಿ ಐದು ವರ್ಷಗಳ ಕಾಲ ಸ್ಥಿರ ಸರ್ಕಾರವನ್ನು ನೀಡಿದ ಕಾಂಗ್ರೆಸ್‌ ಸಾಧನೆ ಮತ್ತು ಜನಪರ ಯೋಜನೆಗಳನ್ನು ಜನರು ಬೆಂಬಲಿಸಿ ಮತ್ತೆ ಸರ್ಕಾರ ರಚನೆಗೆ ಕಾಂಗ್ರೆಸ್‌ಗೆ ಅವಕಾಶ ನೀಡುವ ವಿಶ್ವಾಸವಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸವನ್ನು ಜನರು ಬೆಂಬಲಿಸಿ ಮತ ನೀಡಲಿದ್ದಾರೆ. ಕಾರ್ಯಕರ್ತರು ಮತ್ತು ಮುಖಂಡರ ಪರಿಶ್ರಮದಿಂದ ಚುನಾವಣಾ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಎಲ್ಲಾ ವರ್ಗದ ಜನರ ಬೆಂಬಲದಿಂದ ಮತ್ತೆ ಗೆಲ್ಲುವ ವಿಶ್ವಾಸವಿದೆ ಎಂದು ಮಹದೇವಪ್ಪ ತಿಳಿಸಿದರು.

ಇದೇ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಮುಖಂಡರಾದ ನಂಜುಂಡಸ್ವಾಮಿ, ಸಣ್ಣಪ್ಪ, ದ.ಮಹಾದೇವಪ್ಪ, ಪಿ.ಸ್ವಾಮಿ, ಮೀಸೆ ಮರಿಸ್ವಾಮಿ, ಜಿ.ನಟರಾಜು, ನಾಗೇಶ, ದ.ಗುರುಸ್ವಾಮಿ, ಎಂ.ಎನ್‌.ಶಿವು, ನಾಗರಾಜಪ್ಪ ಹಾಗೂ ಇನ್ನಿತರರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಮತಯಾಚನೆಗೆ ಆಗಮಿಸಿದ ಮಹದೇವಪ್ಪ ಅವರನ್ನು ಪಟಾಕಿ ಸಿಡಿಸಿ, ಭಾರಿ ಗಾತ್ರದ ಹಾರವನ್ನು ಹಾಕಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಮಾಜಿ ಶಾಸಕ ಎಸ್‌.ಕೃಷ್ಣಪ್ಪ, ಜಿಪಂ ಸದಸ್ಯ ಮಂಜುನಾಥನ್‌, ಮೀನುಗಾರಿಕೆ ಮಹಾ ಮಂಡಲದ ಅಧ್ಯಕ್ಷ ಎನ್‌.ನಂಜೇಗೌಡ, ಜಿಪಂ ಮಾಜಿ ಸದಸ್ಯ ಪುಟ್ಟಬಸವಯ್ಯ, ಕಾಂಗ್ರೆಸ್‌ ಯುವ ಮುಖಂಡ ಸುನೀಲ್‌ ಬೋಸ್‌, ಕಿಯೋನಿಕ್ಸ್‌ ನಿರ್ದೇಶಕ ಉಕ್ಕಲಗೆರೆ ಬಸವಣ್ಣ, ಸ್ಪಟಿಕ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಂ.ಕುಮಾರ, ತಾಪಂ ಸದಸ್ಯ ರಾಮಲಿಂಗಯ್ಯ, ಗ್ರಾಪಂ ಸದಸ್ಯ ಎಂ.ರಾಜು, ಮಾಜಿ ಉಪಾಧ್ಯಕ್ಷ ಸಿ.ನಂಜುಂಡಯ್ಯ, ಪಿಕಾರ್ಡ್‌ ಮಾಜಿ ಅಧ್ಯಕ್ಷ ಕೆ.ವಜ್ರೆàಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಕಗ್ಗಲೀಪುರ ಎಂ.ರಾಜು, ಉದ್ಯಮಿ ಕೆ.ನಾಗೇಂದ್ರ ಇನ್ನಿತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next