Advertisement

Cauvery: ನೀರು ಬಿಡದಿದ್ದರೆ ಸರಕಾರ ವಜಾಗೊಳಿಸಬಹುದು: ಸಿಎಂ

12:34 AM Sep 30, 2023 | Team Udayavani |

ಬೆಂಗಳೂರು: ಸದ್ಯ ತಮಿಳುನಾಡಿಗೆ ನೀರು ಕೊಡಬಾರದೆಂ ಬುದು ನಮ್ಮ ಅನಿಸಿಕೆ. ಆದರೆ ನೀರು ಬಿಡದಿದ್ದರೆ ನಮ್ಮ ಜಲಾಶಯಗಳನ್ನು ಕೇಂದ್ರ ಸರಕಾರ ವಶಕ್ಕೆ ಪಡೆಯಬಹುದು. ನ್ಯಾಯಾಂಗ ನಿಂದನೆಯಾಗಿ ಸರಕಾರವನ್ನು ವಜಾಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಕಾವೇರಿ ಹೋರಾಟಗಾರರ ನಿಯೋಗಕ್ಕೆ ತಿಳಿಸಿದರು.

Advertisement

ಗೃಹ ಕಚೇರಿ “ಕೃಷ್ಣಾ’ದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಹಾಗೂ ಮುಖ್ಯಮಂತ್ರಿ ಚಂದ್ರು ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದರು.

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿ ಎರಡು ಸಮಿತಿಗಳು ಪರಿಸ್ಥಿತಿಯನ್ನು ಅವಲೋಕಿಸಿ ಆದೇಶ ನೀಡುತ್ತವೆ. ಬಿಳಿಗುಂಡ್ಲುನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕಾಗುತ್ತದೆ. ನಮ್ಮ ರಾಜ್ಯಕ್ಕೆ 284.85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂಕೋರ್ಟ್‌ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯ ಮಂಡಳಿಯೇ ತೀರ್ಮಾನ ಮಾಡಿದೆ ಎಂದರು.

ಈ ವರ್ಷ ಆಗಸ್ಟ್‌ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಮಳೆ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಪ್ರತಿಪಾದಿಸಿದ್ದೇವೆ ಎಂದರು.

ಪ್ರಾಧಿಕಾರದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮುಂದೆಯೂ ಅರ್ಜಿ ಹಾಕಿದ್ದೆ ವು. ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ಅಗತ್ಯವಿದೆ. 30 ಟಿಎಂಸಿ ಕುಡಿಯುವ ನೀರಿಗೆ ಬೇಕು. ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯ. ಒಟ್ಟು 106 ಟಿಎಂಸಿ ರಾಜ್ಯಕ್ಕೆ ಬೇಕಿದೆ. ಆದರೆ ನಮ್ಮಲ್ಲಿರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರು ಎಂದು ವಿವರಿಸಿದರು.

Advertisement

ಕುರುಬೂರು ಶಾಂತಕುಮಾರ್‌ ಮಾತನಾಡಿ, ಕರ್ನಾಟಕದ ಜನರಿಗೆ ಪೆಟ್ಟು ಬೀಳುವ ಆದೇಶ ಪ್ರಕಟವಾಗುತ್ತಿದೆ. ಜನ ಆತಂಕಗೊಂಡಿ¨ªಾರೆ. ರೈತರ ಪರವಾಗಿ ಸರಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಚಂದ್ರು, ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಈ ನಿಯೋಗದಲ್ಲಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next