Advertisement
ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ಸಂಸದರು ಮತ್ತು ರಾಜ್ಯಸಭಾ ಸದಸ್ಯರೊಂದಿಗೆ ಮಾಹಿತಿ ಹಂಚಿಕೊಳ್ಳಲು ದೆಹಲಿಯಲ್ಲಿ ಬುಧವಾರ ರಾತ್ರಿ ಕುಮಾರಸ್ವಾಮಿ ಸಭೆ ಕರೆದಿದ್ದು, ಈ ವೇಳೆ ಕಾವೇರಿ ಸೇರಿ ರಾಜ್ಯದ ಹಿತದೃಷ್ಟಿಯಿಂದಕೇಂದ್ರದಿಂದ ಹೆಚ್ಚು ಅನುದಾನ ತರುವ ಬಗ್ಗೆ ಎಲ್ಲರೂ ಒಗ್ಗಟ್ಟಾಗಿ ಸಂಸತ್ ಅಧಿವೇಶನದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಲು ತೀರ್ಮಾನಿಸಲಾಯಿತು.
Related Articles
ಹೊಂದಿದೆ. ಅವುಗಳ ಅನುಷ್ಠಾನಕ್ಕೆ ಕೇಂದ್ರದ ನೆರವೂ ಬೇಕಾಗಿದ್ದು, ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ರಾಜ್ಯದ ಪ್ರಸ್ತಾವನೆಗಳನ್ನು ಶೀಘ್ರ ವಿಲೇವಾರಿ ಮಾಡಬೇಕಾಗುತ್ತದೆ. ಆದ್ದರಿಂದ ಕೇಂದ್ರದಲ್ಲಿ ಬಾಕಿ ಉಳಿದಿರುವ ವಿಷಯಗಳು ಮತ್ತು ಯೋಜನೆಗಳ ಬಗ್ಗೆ ಕೇಂದ್ರದ ಗಮನ ಸೆಳೆಯುವಂತೆ ಕೋರಿದರು.
Advertisement
ಮಾಜಿ ಪ್ರಧಾನಿ ಎಚ್‌ಡಿ.ದೇವೇಗೌಡ, ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾ ರ್ಜುನ ಖರ್ಗೆ, ಕೇಂದ್ರ ಸಚಿವರಾದ ಅನಂತ ಕುಮಾರ್, ಸದಾನಂದಗೌಡ, ಅನಂತಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ ಸೇರಿ ರಾಜ್ಯದ ಲೋಕಸಭೆ, ರಾಜ್ಯಸಭೆ ಸದಸ್ಯರು, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಪಾಲ್ಗೊಂಡಿದ್ದರು.
ಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ರೂಪಿಸಿರುವ ಕಾವೇರಿ ಸ್ಕೀಂ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ಜತೆಗೆ ಸಂಸತ್‌ನಲ್ಲೂ ಈ ವಿಚಾರ ಪ್ರಸ್ತಾಪಿಸಲು ಸಂಸದರಲ್ಲಿ ಕೋರಲಾಗಿದೆ.|– ಡಿ.ಕೆ.ಶಿವಕುಮಾರ್,
ಜಲ ಸಂಪನ್ಮೂಲ ಸಚಿವ ಸಂಸತ್‌ನಲ್ಲಿ ಕಾವೇರಿ ವಿಚಾರವನ್ನು ಯಾವ ರೀತಿ ಪ್ರಸ್ತಾಪಿಸ ಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದ ಹಿತದೃಷ್ಟಿಯಿಂದ ಎಲ್ಲರೂ ಪಕ್ಷ ಬೇಧ ಮರೆತು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ.
– ಎಚ್.ಡಿ.ದೇವೇಗೌಡ,
ಮಾಜಿ ಪ್ರಧಾನಿ