ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಸೆ. 26 ರಂದು (ಮಂಗಳವಾರ) ಬೆಂಗಳೂರು ನಗರ ಬಂದ್ಗೆ ಕರೆ ನೀಡಿವೆ.
ಬಂದ್ಗೆ ಕುರಿತು ಅಧಿಕೃತ ಘೋಷಣೆ ಇನ್ನಷ್ಟೇ ಮಾಡಬೇಕಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸರಕಾರದ ನಡೆ ಖಂಡಿಸಿ ಮಂಡ್ಯ, ಮದ್ದೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರದ ವಿವಿಧೆಡೆ ಶನಿವಾರ ಭಾರಿ ಪ್ರತಿಭಟನೆಗಳನ್ನು ನಡೆಸಲಾಗಿದೆ.
ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿ ಪ್ರಮುಖ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಕನ್ನಡ ಚಳವಳಿಯ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಗಳಿದ್ದು, ಹಲವು ಸಂಘಟನೆಗಳು ಈಗಾಗಲೇ ಬೆಂಬಲ ಸೂಚಿಸಿವೆ.
ಬಂದ್ ವೇಳೆ ಟೌನ್ ಹಾಲ್ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲು ಉದ್ದೇಶಿಸಲಾಗಿದೆ. ಇದೆ ವೇಳೆ ಕೆಲ ಸಂಘಟನೆಗಳು ಸೋಮವಾರ (ಸೆ. 25) ಬೆಂಗಳೂರು ಬಂದ್ ನಡೆಸುವ ಬಗ್ಗೆ ಅಭಿಪ್ರಾಯ ಹೊರ ಹಾಕಿದ್ದಾರೆ.
ಕುರುಬೂರು ಶಾಂತ ಕುಮಾರ್ ನೇತೃತ್ವದ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಸಂಘ ಫ್ರೀಡಂ ಪಾರ್ಕ್ ನಲ್ಲಿ ಸಭೆ ನಡೆಸಿದ ಬಳಿಕ ಬಂದ್ ಗೆ ಕರೆ ನೀಡಿದೆ. ಕರೆಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ.