Advertisement
ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ.28 ಒಳಹರಿವಿನ ಕೊರತೆ ಇದೆ. ಇದನ್ನು ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ಸ್ಪಷ್ಟವಾಗಿ ಹೇಳಿದ್ದೆವು. ಜತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ ಅವರು ಜುಲೈ 12ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಕಾವೇರಿ ಜಲಾನಯನ ಪ್ರದೇಶದ ಹಿತಾಸಕ್ತಿಗಾಗಿ ಸರಕಾರ ಹೋರಾಟ ಮಾಡಲಿದೆ ಎಂದರು.
19 ಟಿಎಂಸಿ ನೀರಿನ ಕೊರತೆ: ಡಿಕೆಶಿ
ಬೆಂಗಳೂರು: ಕಾವೇರಿ ಜಲಾನಯನದ ಪ್ರಮುಖ ಅಣೆಕಟ್ಟುಗಳಲ್ಲಿ ಸರಾಸರಿ ಶೇ. 62 ಮಾತ್ರ ನೀರಿನ ಲಭ್ಯತೆಯಿದೆ. ಸುಮಾರು 19 ಟಿಎಂಸಿಯಷ್ಟು ನೀರಿನ ಕೊರತೆ ಕಂಡು ಬಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Related Articles
Advertisement
ಕಬಿನಿಯಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆಯೇ ಎಂದಾಗ ಕಬಿನಿಯು ಶೇ.96 ರಷ್ಟು ತುಂಬಿದ್ದು ಅಣೆಕಟ್ಟಿನ ಸುರಕ್ಷತೆ ದೃಷ್ಟಿಯಿಂದ ಒಳಹರಿವಿನ ಪ್ರಮಾಣದಷ್ಟೇ ನೀರನ್ನು ಹೊರಗೆ ಬಿಡಲಾಗುತ್ತಿದೆ ಎಂದು ಹೇಳಿದರು.
ನಮಗೆ ಮಳೆ ಕೊರತೆ ಉಂಟಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸಬೇಕು ಎಂದು ಹೇಳಿದೆ. ನಾನು ದೆಹಲಿಯಲ್ಲಿ ಇರುವ ವಕೀಲರಾದ ಮೋಹನ್ ಕಾತರಕಿ, ಶ್ಯಾಮ್ ದಿವಾನ್ ಅವರ ಬಳಿ ಮಾತನಾಡಿದ್ದೇನೆ. ಅವರು ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.
ತುರ್ತು ಪರಿಸ್ಥಿತಿ…ಬಿಜೆಪಿಯಿಂದ ಸಂವಿಧಾನ ಹತ್ಯಾ ದಿನ ಆಚರಣೆಯ ಘೋಷಣೆ ಬಗ್ಗೆಕೇಳಿದಾಗ, ತುರ್ತು ಪರಿಸ್ಥಿತಿಯ ಅನಂತರವೂ ಈ ದೇಶದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿ.ವಿ.ನರಸಿಂಹರಾವ್, ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದರು. ಈ ದೇಶದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದರು.