Advertisement

ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕಂತೆ!

09:11 PM Jul 04, 2023 | Team Udayavani |

ಚೆನ್ನೈ: ಕಾವೇರಿ ವಿಚಾರದಲ್ಲಿ ಮತ್ತೆ ತಗಾದೆ ತೆಗೆದಿರುವ ತಮಿಳುನಾಡು ಸರ್ಕಾರ, ತನಗೆ ಜುಲೈ ತಿಂಗಳ ಕಾವೇರಿ ನದಿ ನೀರಿನ ಹಂಚಿಕೆ ಮಾಡಬೇಕು ಎಂದು ಪಟ್ಟು ಹಿಡಿದಿದೆ. ಅಷ್ಟೇ ಅಲ್ಲ, ಈ ಸಂಬಂಧ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಪತ್ರವನ್ನೂ ಬರೆದಿದೆ.

Advertisement

ಸದ್ಯ ಕರ್ನಾಟಕದಲ್ಲಿ ಸರಿಯಾಗಿ ಮಳೆಯಾಗುತ್ತಿಲ್ಲ. ಅಲ್ಲದೆ, ಕಾವೇರಿ ಉಗಮ ಸ್ಥಾನ ಕೊಡಗಿನಲ್ಲಿಯೂ ಮಳೆ ಕೊರತೆ ಕಾಡುತ್ತಿಲ್ಲ. ಕೆಆರ್‌ಎಸ್‌ಗೆ ಒಳಹರಿವು ಕನಿಷ್ಠ ಮಟ್ಟದಲ್ಲಿದೆ. ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಿಗೆ ಕುಡಿಯುವ ನೀರು ಒದಗಿಸಲು ಸಾಕಾಗುತ್ತಿಲ್ಲ. ಇಂಥ ಹೊತ್ತಿನಲ್ಲಿ ತಮಿಳುನಾಡು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಜು.3ರಂದು ಪತ್ರ ಬರೆದಿದ್ದು, ನೀರು ಬಿಡಲು ಸೂಚನೆ ನೀಡಬೇಕು ಎಂದು ಮನವಿ ಮಾಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next