Advertisement

ಐಎನ್ ಎಕ್ಸ್ ಕೇಸ್; ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಐದು ದಿನ ಸಿಬಿಐ ಕಸ್ಟಡಿಗೆ

09:29 AM Aug 23, 2019 | Team Udayavani |

ನವದೆಹಲಿ: ರಾಜಕೀಯ ಹೈಡ್ರಾಮಾಕ್ಕೆ ಸಾಕ್ಷಿಯಾದ ಐಎನ್ ಎಕ್ಸ್ ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂಗೆ ಆಗಸ್ಟ್ 26ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿ ಅಂತಿಮ ತೀರ್ಪು ಪ್ರಕಟಿಸಿದೆ.

Advertisement

ಬುಧವಾರ ರಾತ್ರಿ ನಾಟಕೀಯ ಬೆಳವಣಿಗೆಯಲ್ಲಿ ಸಿಬಿಐ ಪಿ.ಚಿದಂಬರಂ ಅವರನ್ನು ಮನೆಯಲ್ಲಿ ಬಂಧಿಸಿತ್ತು. ಗುರುವಾರ ಸಂಜೆ ಸಿಬಿಐ ವಿಶೇಷ ಕೋರ್ಟ್ ಗೆ ಹಾಜರುಪಡಿಸಿತ್ತು.

ಸಿಬಿಐ ವಿಶೇಷ ಕೋರ್ಟ್ ನಲ್ಲಿ ಚಿದಂಬರಂ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು. ಯಾವುದೇ ಕಾರಣಕ್ಕೂ ಕಸ್ಟಡಿ ವಿಧಿಸಿ ವಿಚಾರಣೆ ನಡೆಸಲು ಅವಕಾಶ ನೀಡಬಾರದು. ಇಂದ್ರಾಣಿ ಮುಖರ್ಜಿ ಹೇಳಿಕೆ ಆಧರಿಸಿದ ಪ್ರಕರಣ ಇದಾಗಿದೆ. ಯಾವುದೇ ಬಲವಾದ ಸಾಕ್ಷ್ಯಾಧಾರಗಳಿಲ್ಲ ಎಂದು ವಾದಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಸಹಕಾರ ನೀಡಿಲ್ಲ. ಇದೊಂದು ಗಂಭೀರ ಪ್ರಕರಣವಾಗಿದ್ದು ಐದು ದಿನಗಳ ಕಾಲ ವಶಕ್ಕೆ ಒಪ್ಪಿಸಬೇಕೆಂದು ಸಿಬಿಐ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ವಾದ, ಪ್ರತಿವಾದ ಆಲಿಸಿದ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next