Advertisement
ಪ್ರಕರಣ ಸಂಬಂಧ ಈ ಮೊದಲು ತನಿಖೆ ನಡೆಸುತ್ತಿದ್ದ ವಿಧಾನಸೌಧ ಪೊಲೀಸರು ಆರೋಪಿಯನ್ನು ಐದು ದಿನಗಳ ಕಾಲ ವಶಕ್ಕೆ ಪಡೆದಿದ್ದರು. ಸೋಮವಾರ ವಶಕ್ಕೆ ಪಡೆದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ 8 ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರು ಪಡಿಸಿದ್ದರು.
ಲೋಕಾಯುಕ್ತರ ಆರೋಗ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಚೇತರಿಕೆ ಕಂಡು ಬಂದಿದ್ದು, ಸದ್ಯದಲ್ಲೇ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಿದ್ದಾರೆ. ಪ್ರತಿದಿನ ಮೂರು ಬಾರಿ ಲೋಕಾಯುಕ್ತರ ರಕ್ತದ ಒತ್ತಡ, ಶುಗರ್ ಪ್ರಮಾಣದಲ್ಲಿ ಏರುಪೇರು ಆಗುತ್ತಿದೆ. ಹೀಗಾಗಿ ಸದ್ಯ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಿದ್ದೇವೆ ಎಂದು ಮಲ್ಯ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.